ಕನ್ನಡಪ್ರಭ ವಾರ್ತೆ ಮಂಗಳೂರು
9 ದಿನಗಳ ನೃತೋತ್ಸವ :
ಪ್ರತೀ ವರ್ಷ ಪೆರಿಯ ಗೋಕುಲಂ ಗೋಶಾಲೆಯಲ್ಲಿ ದೀಪಾವಳಿ ಸಂಗೀತೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಾರತದ ನಾನಾ ಭಾಗಗಳಿಂದ ನುರಿತ ಸಂಗೀತ ಕಲಾವಿದರು ಈ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನೃತ್ಯಕಲಾವಿದರಿಗೂ ಅವಕಾಶವನ್ನು ಕಲ್ಪಿಸುವ ಸಲುವಾಗಿ ದೇಶೀಯ ನೃತ್ಯೋತ್ಸವ 9 ದಿನಗಳ ಕಾಲ ನಡೆಯಲಿದೆ. ಮೇ 8 ರಂದು ಸಂಜೆ 5ರಿಂದ ಗಾಯತ್ರಿ ರಾಜಾಜಿ, ತೀರ್ಥ ಇ.ಪೊದುವಾಳ್, ವರ್ಷಾ ರಾಜಕುಮಾರ್, ಕಲಾಕ್ಷೇತ್ರ ಎಂ.ಎಸ್.ಸನೀಶ್ ಅವರಿಂದ ಭರತನಾಟ್ಯ ನಡೆಯಲಿದೆ. ಮೇ.16ರ ತನಕ ಮುಂದುವರಿಯಲಿರುವ ನೃತೋತ್ಸವದಲ್ಲಿ 372 ಮಂದಿ ನೃತ್ಯ ಕಲಾವಿದರು ಪಾಲ್ಗೊಳ್ಳಲಿದ್ದಾರೆ.ಗೋಕುಲಂ ಗೋಶಾಲೆ :ಗೋಕುಲಂ ಗೋಶಾಲೆಯು ಕೇವಲ ಒಂದು ಕಪಿಲ ಹೋರಿ ಮತ್ತು ವೆಚೂರ್ ತಳಿಯ ಹಸುವಿನೊಂದಿಗೆ ಪ್ರಾರಂಭವಾಗಿದ್ದು, ಇಂದು ಸುಮಾರು 200ಕ್ಕೂ ಹೆಚ್ಚು ವಿವಿಧ ದೇಶೀಯ ತಳಿಯ ಗೋವುಗಳ ಆವಾಸ ಸ್ಥಾನವಾಗಿದೆ. ಗೋಶಾಲೆಯ ಮಧ್ಯದಲ್ಲೇ ನಡೆಯುವ ಸಂಗೀತೋತ್ಸವ, ನೃತ್ಯದ ಸಂದರ್ಭ ಗೋವುಗಳೂ ತಲೆದೂಗುವುದು, ಆಸ್ವಾದಿಸುವುದುನ್ನು ಕಣ್ತುಂಬಿಕೊಳ್ಳಬಹುದಾಗಿದೆ.2021ರಲ್ಲಿ ವಿಷ್ಣುಪ್ರಸಾದ ಹೆಬ್ಬಾರ್ ಅವರ ನೇತೃತ್ವದಲ್ಲಿ ವೇದ-ವೇದಾಂಗ ವಿದ್ಯೆಗಳನ್ನು ಕಲಿಸುವ ನಿಟ್ಟಿನಲ್ಲಿ ಪರಂಪರಾ ವಿದ್ಯಾಪೀಠವನ್ನು ಸ್ಥಾಪಿಸಲಾಯಿತು. ಗೋಶಾಲೆಯ ಡಾ. ನಾಗರತ್ನ ಹೆಬ್ಬಾರ್ ಅವರೊಂದಿಗೆ ಪ್ರಸಿದ್ಧ ಕಲಾವಿದರಾದ ಪಯ್ಯನ್ನೂರು ಗೋವಿಂದ ಪ್ರಸಾದ್ ಹಾಗೂ ಕರ್ನಾಟಕ ಸಂಗೀತಗಾರ್ತಿ ವೈಷ್ಣವಿ ಆನಂದ್ ಅವರ ಮುಂದಾಳುತ್ವದಲ್ಲಿ ಗೋಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.