ಬಂಟ್ವಾಳ: ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ ಕಲ್ಲಡ್ಕ, ಭರತನಾಟ್ಯ ಸಂಸ್ಥೆಯ ವಿದ್ಯಾರ್ಥಿನಿ ಆತ್ಮಿ ಶೆಟ್ಟಿ ಅವರ ಭರತ ನಾಟ್ಯ ರಂಗಪ್ರವೇಶ ಕಾರ್‍ಯಕ್ರಮ ಏ. 4ರಂದು ಸಂಜೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ನೃತ್ಯ ಗುರು ವಿದುಷಿ ವಿದ್ಯಾ ಮನೋಜ್ ಹೇಳಿದ್ದಾರೆ.ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮಿ ಶೆಟ್ಟಿ 12 ವರ್ಷಗಳಿಂದ ನನ್ನ ಬಳಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದು, ವಿದ್ವತ್ ಅಂತಿಮ ಪರೀಕ್ಷೆಯ ತಯಾರಿಯಲ್ಲಿದ್ದಾರೆ ಎಂದರು.ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ನೃತ್ಯ ಗುರು ಶಾಂತಲಾ ಪ್ರಶಸ್ತಿ ಪುರಸ್ಕೃತರಾದ ಉಳ್ಳಾಲ ಮೋಹನ್ ಕುಮಾರ್, ಪುತ್ತೂರು ವಿಶ್ವಕಲಾನಿಕೇತನ ಸಂಸ್ಥೆಯ ನಿರ್ದೇಶಕಿ ಗುರು ವಿದುಷಿ ನಯನ ವಿ.ರೈ, ನೃತ್ಯಗಿರಿ ಮೈಸೂರು ಭರತನಾಟ್ಯ ಸಂಸ್ಥೆಯ ನಿರ್ದೇಶಕರಾದ ಡಾ. ಕೃಪಾ ಪಡ್ಕೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಪಟ್ಲ ಸತೀಶ್ ಶೆಟ್ಟಿ, ಉದ್ಯಮಿ ಚಂದ್ರಹಾಸ ಡಿ. ಶೆಟ್ಟಿ ಭಾಗವಹಿಸಲಿದ್ದಾರೆ ಎಂದರು.
ಭರತನಾಟ್ಯ ವಿದ್ಯಾರ್ಥಿನಿ ಆತ್ಮಿಶೆಟ್ಟಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಉದಯ ಕುಮಾರ್ ಶೆಟ್ಟಿ, ಶಾಲಿನಿ ಶೆಟ್ಟಿ, ಮಾವ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.