ಶಾಲಾ ಹಂತದಲ್ಲೇ ಮಕ್ಕಳನ್ನು ದಂಡಿಸದಿದ್ದರೆ ಅಪಾಯ: ನಿಶ್ಚಲಾನಂದನಾಥ ಸ್ವಾಮೀಜಿ

KannadaprabhaNewsNetwork |  
Published : Feb 17, 2026, 01:30 AM IST
16ಕೆಎಂಎನ್‌ಡಿ-10ಚಂದೂಪುರ ಶಾಂತಿನಿಕೇತನ ಪಬ್ಲಿಕ್ ಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ. ನಿಶ್ಚಲನಂದನಾಥ ಸ್ವಾಮೀಜಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಹಿಂದಿನ ಕಾಲದಲ್ಲಿ ಮಕ್ಕಳನ್ನು ಶಿಕ್ಷಕರು ದಂಡಿಸುತಿದ್ದರು. ಅಂತಹ ಮಕ್ಕಳು ದೊಡ್ಡವರಾದ ಬಳಿಕ ಸನ್ಮಾರ್ಗದಲ್ಲಿ ನಡೆಯುತಿದ್ದರು. ಆದರೆ, ಇಂದಿನ ಕಾಲದಲ್ಲಿ ತದ್ವಿರುದ್ದವಾಗಿದ್ದು ಶಿಕ್ಷಕರು ದಂಡಿಸಿದರೇ ಪೋಷಕರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಪ್ರೌಢ ಶಿಕ್ಷಣದ ಬಳಿಕ ಅವರ ನಡವಳಿಕೆ ಬದಲಾಗಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಮೂಲಕ ಕಾನೂನಿನ ದಂಡನೆಗೆ ಒಳಗಾಗಬೇಕಾಗುತ್ತದೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಶಿಕ್ಷಕರು ಶಾಲಾ ಹಂತದಲ್ಲಿ ಮಕ್ಕಳನ್ನು ದಂಡಿಸಿ ಸರಿಯಾದ ಮಾರ್ಗದಲ್ಲಿ ನಡೆಸದಿದ್ದರೆ ಅಂತಹವರನ್ನು ಮುಂದಿನ ದಿನಗಳಲ್ಲಿ ಕಾನೂನು ದಂಡಿಸುತ್ತದೆ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲನಂದನಾಥ ಸ್ವಾಮೀಜಿ ಎಚ್ಚರಿಸಿದರು.

ಸಮೀಪದ ಚಂದೂಪುರ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ ಸ್ನೇಹ ಬಂಧನ ಎಜುಕೇಷನ್ ಟ್ರಸ್ಟ್ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿ, ಮಕ್ಕಳನ್ನು ಶಿಕ್ಷಕರು ದಂಡಿಸಿದರೆ ಮಹಾ ಅಪರಾದ ಎಂದು ಪೋಷಕರು ಬಿಂಬಿಸುತ್ತಾರೆ. ಇಂತಹ ವಿತಂಡವಾದವನ್ನು ಬಿಟ್ಟು ಮಕ್ಕಳ ಪ್ರಗತಿಗೆ ಪೋಷಕರು ಸಹಕರಿಸಿದರೆ ಮುಂದಿನ ದಿನಗಳಲ್ಲಿ ಅವರನ್ನು ಯಾರೂ ದಂಡಿಸುವ ಅಗತ್ಯವಿಲ್ಲ ಎಂದರು.

ಹಿಂದಿನ ಕಾಲದಲ್ಲಿ ಮಕ್ಕಳನ್ನು ಶಿಕ್ಷಕರು ದಂಡಿಸುತಿದ್ದರು. ಅಂತಹ ಮಕ್ಕಳು ದೊಡ್ಡವರಾದ ಬಳಿಕ ಸನ್ಮಾರ್ಗದಲ್ಲಿ ನಡೆಯುತಿದ್ದರು. ಆದರೆ, ಇಂದಿನ ಕಾಲದಲ್ಲಿ ತದ್ವಿರುದ್ದವಾಗಿದ್ದು ಶಿಕ್ಷಕರು ದಂಡಿಸಿದರೇ ಪೋಷಕರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಪ್ರೌಢ ಶಿಕ್ಷಣದ ಬಳಿಕ ಅವರ ನಡವಳಿಕೆ ಬದಲಾಗಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಮೂಲಕ ಕಾನೂನಿನ ದಂಡನೆಗೆ ಒಳಗಾಗಬೇಕಾಗುತ್ತದೆ ಎಂಬ ಎಚ್ಚರಿಕೆ ಮಾತುಗಳನ್ನು ಆಡಿದರು.

ಶಿಕ್ಷಕರು ತಳಮಟ್ಟದಲ್ಲಿ ಮಕ್ಕಳನ್ನು ದಂಡಿಸಿ ಅವರಿಗೆ ಉತ್ತಮ ಶಿಕ್ಷಣ ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಬೆಳಸಬೇಕು ಇದಕ್ಕೆ ಪೋಷಕರು ಪ್ರೋತ್ಸಾಹಿಸಬೇಕು. ಶಿಕ್ಷಕರು ಮತ್ತು ಪೋಷಕರ ಸಹಭಾಗಿತ್ವದಲ್ಲಿ ಮಕ್ಕಳ ಪ್ರಗತಿಯ ಬಗ್ಗೆ ಪ್ರತಿ ಹಂತದಲ್ಲೂ ಅವಲೋಕಿಸಬೇಕು ಎಂದರು.

ಶಿಕ್ಷಕರು ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿ ಅವರ ತಪ್ಪುಗಳನ್ನು ತಿದ್ದಿತೀಡಿ ಅವರನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸದಿದ್ದರೆ ಶಿಕ್ಷಣಕ್ಕೆ ಅರ್ಥವಿಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಅತಿಯಾದ ಮೊಬೈಲ್ ಬಳಕೆಯಿಂದಾಗಿ ಮಕ್ಕಳು ದಿಕ್ಕು ತಪ್ಪುತ್ತಿದ್ದಾರೆ. ಅತಿಯಾದ ಮೊಬೈಲ್ ಬಳಕೆ ಅಪಾಯದ ಸಂಕೇತ. ಅದೊಂದು ದುಶ್ಚಟವಾಗಿ ಪರಿಣಮಿಸಿದ್ದು ಪೋಷಕರು ಹಾಗೂ ಶಿಕ್ಷಕರು ಮಕ್ಕಳ ಬಳಿ ಹೆಚ್ಚು ಮೊಬೈಲ್ ಬಳಕೆಯನ್ನು ತಪ್ಪಿಸಬೇಕು ಎಂದರು.

ಪೊಲೀಸ್ ಇನ್ಸ್‌ಪೆಕ್ಟರ್ ಜಿ.ಅನಿಲ್‌ಕುಮಾರ್ ಮಾತನಾಡಿ, ಮಕ್ಕಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಅವರಿಗೆ ತಳಪಾಯದಲ್ಲಿ ಉತ್ತಮ ಶಿಕ್ಷಣ ಕೊಡಿಸಬೇಕು ಇಲ್ಲವಾದಲ್ಲಿ ಅಂತಹ ಮಕ್ಕಳು ಅಪರಾಧ ಪ್ರಕರಣದಲ್ಲಿ ಭಾಗಿಯಾಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ಬೆಂಗಳೂರಿನ ಕರ್ನಾಟಕ ರಾಜ್ಯ ಮುಖ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕ, ಸಂವಿಧಾನ ತಜ್ಞ ಡಾ.ಸುಧಾಕರ್ ಹೊಸಳ್ಳಿ ಉದ್ಘಾಟಿಸಿದರು. ಸ್ನೇಹ ಬಂಧನ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಎಚ್.ಸಿ. ಉಮೇಶ್, ಟ್ರಸ್ಟಿಗಳಾದ ಆಶಾರಾಣಿ ವಿಶ್ವನಾಥ್, ನಾಗರತ್ನ ಉಮೇಶ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ನಿಂಗರಾಜು, ಜೆಕೆ, ಶಾಲಾ ಮುಖ್ಯ ಶಿಕ್ಷಕ ಎಚ್.ಡಿ.ದೇವೇಗೌಡ ಮತ್ತಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾತ್ರೆ: ಎಸ್‌ಪಿ ನೇತೃತ್ವದಲ್ಲಿ ಜನಜಾಗೃತಿ ಪಥ ಸಂಚಲನ
ನಶಿಸುತ್ತಿರುವ ಅಡುಗೆ ಬಗ್ಗೆ ತಿಳಿಸುತ್ತಿರುವುದು ಶ್ಲಾಘನೀಯ: ಶಾಸಕ ಷಡಕ್ಷರಿ