ಉಡುಪಿ ಶ್ರೀ ಮಹಾಧನ್ವಂತರಿ ಯಾಗ ಕಾರ್ಯಾಲಯ ಆರಂಭ

KannadaprabhaNewsNetwork |  
Published : Nov 13, 2026, 02:45 AM IST
ಶ್ರೀ ಮಹಾಧನ್ವಂತರಿ ಯಾಗ ಕಾರ್ಯಾಲಯವನ್ನು ಪೇಜಾವರ ಶ್ರೀಗಳು ಉದ್ಘಾಟಿಸಿದರು | Kannada Prabha

ಸಾರಾಂಶ

ಸನಾತನ ಸಂಸ್ಥೆಯ ವತಿಯಿಂದ ಉಡುಪಿಯಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗುತ್ತಿರುವ ‘ಶ್ರೀ ಮಹಾಧನ್ವಂತರಿ ಯಾಗ’ದ ಪ್ರಚಾರ ಹಾಗೂ ಪೂರ್ವಸಿದ್ಧತೆಗಳಿಗಾಗಿ ಪೇಜಾವರ ಮಠದ ಹಿಂಭಾಗದಲ್ಲಿ ನೂತನವಾಗಿ ಆರಂಭಿಸಲಾದ ಕಾರ್ಯಾಲಯವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ದೀಪಪ್ರಜ್ವಲನದ ಮೂಲಕ ಉದ್ಘಾಟಿಸಿದರು.

ಉಡುಪಿ: ಸನಾತನ ಸಂಸ್ಥೆಯ ವತಿಯಿಂದ ಉಡುಪಿಯಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗುತ್ತಿರುವ ‘ಶ್ರೀ ಮಹಾಧನ್ವಂತರಿ ಯಾಗ’ದ ಪ್ರಚಾರ ಹಾಗೂ ಪೂರ್ವಸಿದ್ಧತೆಗಳಿಗಾಗಿ ಪೇಜಾವರ ಮಠದ ಹಿಂಭಾಗದಲ್ಲಿ ನೂತನವಾಗಿ ಆರಂಭಿಸಲಾದ ಕಾರ್ಯಾಲಯವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ದೀಪಪ್ರಜ್ವಲನದ ಮೂಲಕ ಉದ್ಘಾಟಿಸಿದರು.ನಂತರ ಆಶೀರ್ವಚನ ನೀಡಿದ ಸ್ವಾಮೀಜಿಯವರು, ಲೋಕಕಲ್ಯಾಣ ಹಾಗೂ ಧರ್ಮಸಂಸ್ಥಾಪನೆಯ ಉದ್ಧೇಶದಿಂದ ನಡೆಯುವ ಇಂತಹ ಸಾತ್ತ್ವಿಕ ಕಾರ್ಯಕ್ರಮಗಳು ಸಮಾಜದಲ್ಲಿ ಧರ್ಮತೇಜಸ್ಸನ್ನು ಹೆಚ್ಚಿಸುತ್ತವೆ. ಸಾರ್ವಜನಿಕರ ಆರೋಗ್ಯ ವೃದ್ಧಿ ಮತ್ತು ಸದ್ಭಾವನೆಗಾಗಿ ಹಮ್ಮಿಕೊಳ್ಳಲಾಗಿರುವ ಈ ಮಹಾಯಾಗವು ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರುಪ್ರಸ್ತಾವಿಕವಾಗಿ ಮಾತನಾಡಿದ ಸ್ವಾಗತ ಸಮಿತಿಯ ಸಂಚಾಲಕ ಗುರುಪ್ರಸಾದ್ ಗೌಡ ಅವರು, ಈಗಾಗಲೇ ಯಾಗದ ಸಿದ್ಧತೆಗಳಿಗಾಗಿ ಮೂರು ಪೂರ್ವಭಾವಿ ಸಭೆಗಳು ನಡೆದಿದ್ದು, ಯಾಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಸಂಘಟನೆಗಳು, ಧರ್ಮಪ್ರೇಮಿಗಳು ಕೈಜೋಡಿಸಿದ್ದಾರೆ ಎಂದು ತಿಳಿಸಿದರು.ಉಡುಪಿಯಲ್ಲಿ ಪ್ರಥಮ ಬಾರಿ ನಡೆಯುತ್ತಿರುವ ಈ ಮಹಾಧನ್ವಂತರಿ ಯಾಗದ ಲಾಭವನ್ನು ಪ್ರತಿಯೊಬ್ಬ ಧರ್ಮಾಭಿಮಾನಿಯೂ ಪಡೆದುಕೊಳ್ಳಬೇಕು ಮತ್ತು ಈಗಾಗಲೇ ಸುಮಾರು 6 ಸಾವಿರಕ್ಕಿಂತಲೂ ಹೆಚ್ಚು ಜನರು ಯಾಗಕ್ಕೆ ಬರಲು ತಮ್ಮ ನೋಂದಣಿ ಮಾಡಿದ್ದಾರೆ ಎಂದು ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಅವರು ತಿಳಿಸಿದರು.

ಯಾಗ ಸಮಿತಿಯ ಸಂಘಟನಾ ಕಾರ್ಯದರ್ಶಿ ವಿಜಯ ಕೊಡವೂರು ಅವರು ಮಾತನಾಡಿ, ಸಮಾಜದ ಎಲ್ಲಾ ಸಂಘಟನೆಗಳನ್ನು ಆಮಂತ್ರಿಸಲಾಗುತ್ತಿದೆ. ಆದ್ದರಿಂದ ಜಾತಿಬೇಧ ಇಲ್ಲದೇ ಸರ್ವರೂ ಈ ಯಾಗದಲ್ಲಿ ಭಾಗವಹಿಸಲಿದ್ದಾರೆ ಬಗ್ಗೆ ತಿಳಿಸಿದರು.ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತ ಪೂಜ್ಯ ರಮಾನಂದ ಗೌಡ, ಸಮಿತಿ ಪ್ರಮುಖರಾದ ರಾಧಾಕೃಷ್ಣ ಮಲ್ಪೆ, ತಾರಾ ಉಮೇಶ್ ಆಚಾರ್ಯ, ಮಂಜುನಾಥ ಮಣಿಪಾಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌