ದರೆಗುಡ್ಡೆ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದ ಶಾಸಕ

KannadaprabhaNewsNetwork |  
Published : Feb 06, 2025, 12:18 AM IST
32 | Kannada Prabha

ಸಾರಾಂಶ

ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಾದ ಪಂಚಾಯಿತಿ ನೂತನ ಕಟ್ಟಡದಲ್ಲಿ ನವೀಕೃತ ಕೊಠಡಿ, ದರೆಗುಡ್ಡೆಯ ರು. 20ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ, ಕೆಲ್ಲಪುತ್ತಿಗೆಯಲ್ಲಿ ವಿವೇಕ ಶಾಲಾ ಕೊಠಡಿ, ಆದಿವಾಸಿ ಕೊರಗ ಸಮುದಾಯದ 18 ಲಕ್ಷದ ಸಮುದಾಯ ಭವನ, ರು. 5ಲಕ್ಷ ವೆಚ್ಚದ ಸೋಲಾರ್ ಲೈಟ್ ಕಾಮಗಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಾದ ಪಂಚಾಯಿತಿ ನೂತನ ಕಟ್ಟಡದಲ್ಲಿ ನವೀಕೃತ ಕೊಠಡಿ, ದರೆಗುಡ್ಡೆಯ ರು. 20ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ, ಕೆಲ್ಲಪುತ್ತಿಗೆಯಲ್ಲಿ ವಿವೇಕ ಶಾಲಾ ಕೊಠಡಿ, ಆದಿವಾಸಿ ಕೊರಗ ಸಮುದಾಯದ 18 ಲಕ್ಷದ ಸಮುದಾಯ ಭವನ, ರು. 5ಲಕ್ಷ ವೆಚ್ಚದ ಸೋಲಾರ್ ಲೈಟ್ ಕಾಮಗಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 15 ಕೋಟಿ ರು.ಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳ ಅನುದಾನವನ್ನು ತನ್ನ ಶಾಸಕತ್ವದಲ್ಲಿ ಒದಗಿಸಲಾಗಿದೆ. ಪಣಪಿಲದಲ್ಲಿ ಅಕಾಲಿಕ ಮಳೆಗೆ ಕೊಚ್ಚಿ ಹೋದ ಸೇತುವೆ ನಿರ್ಮಾಣಕ್ಕೆ 50 ಲಕ್ಷ ರು., ಇಟಲ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯ ಪೂರಕವಾಗಿ ದೇವಳದ ರಸ್ತೆ ಅಭಿವೃದ್ಧಿಗೆ 50 ಲಕ್ಷ ರು. ಅನುದಾನ ಮಂಜೂರಾಗಿದ್ದು ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಪೂರಕವಾಗಿ ಸ್ಪಂದಿಸಿದಾಗ ಜನಪರವಾಗಿ ಬೆಳೆಯಲು ಸಾಧ್ಯ ಎಂದರು.

ದರೆಗುಡ್ಡೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು ಅಧ್ಯಕ್ಷತೆ ವಹಿಸಿದ್ದರು.

ಪಂಚಾಯಿತಿ ಉಪಾಧ್ಯಕ್ಷೆ ನಳಿನಿ, ಸದಸ್ಯರಾದ ಮುನಿರಾಜ ಹೆಗ್ಡೆ, ತುಳಸಿ ಮೂಲ್ಯ, ಸುಭಾಶ್ಚಂದ್ರ ಚೌಟ, ದೀಕ್ಷಿತ್ ಪಣಪಿಲ, ಸಂತೋಷ್ ಪೂಜಾರಿ, ಪ್ರಸಾದ್ ಕುಮಾರ್, ಶಾಲಿನಿ, ಶಶಿಕಲಾ, ಜನಿತಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಪಿ. ಜಗದೀಶ ಅಧಿಕಾರಿ, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು, ಕಾರ್ಯದರ್ಶಿ ಸತ್ಯಭಾಮ, ಶಾಲಾ ಮುಖ್ಯೋಪಾಧ್ಯಾಯ ಡಿಚಾರ್ಡ್ ಡಿಕೋಸ್ತ, ಕೆಲ್ಲಪುತ್ತಿಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೀರೇಂದ್ರ ಕೋಟ್ಯಾನ್, ವಜ್ರನಾಭ ಹೆಗ್ಡೆ ದೊಡ್ಡಮನೆ, ಗುತ್ತಿಗೆದಾರ ಪ್ರಶಾಂತ್ ಎಸ್. ಅಮೀನ್, ಅಂಗನವಾಡಿ ಮೇಲ್ವಿಚಾರಕಿ ಶುಭಾ, ಕಾತ್ಯಾಯಿನಿ, ಅಂಗನವಾಡಿ ಶಿಕ್ಷಕಿ ಶ್ರೀಮತಿ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ಕೆ. ಕರಿಯ, ಕರಾವಳಿ ಕೇಸರಿ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಮಿತ್‌ರಾಜ್ ದರೆಗುಡ್ಡೆ, ಸಂದೀಪ್ ಸುವರ್ಣ ಕೆಲ್ಲಪುತ್ತಿಗೆ, ದರೆಗುಡ್ಡೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ಕುಮಾರ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್, ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಕುಸುಮಾ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗೋಪಾಲ ರಾವ್ ಮತ್ತಿತರರಿದ್ದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಪಂಚಾಯಿತಿ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು ಶಿಕ್ಷಕಿ ರಮಣಿ ಬಿ., ಶ್ರೀಮತಿ, ಸಹಾಯಕಿಯರಾದ ವೆಲಂಟೈನ್ ಡಿಕುನ್ಹ, ಲಲಿತಾ, ಪದೋನ್ನತಿಗೊಂಡ ವಲಯ ಮೇಲ್ವಿಚಾರಕಿ ಶುಭ ಸೇರಿದಂತೆ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿಗಳಿಗೆ ಸಹಕರಿಸುತ್ತಿರುವವರನ್ನು ಸನ್ಮಾನಿಸಲಾಯಿತು.

ಗಣೇಶ್ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌