ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸೂಚನೆ ಮೇರೆಗೆ ಭಾರತೀಯ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಯ ಸಂಕಲ್ಪದೊಂದಿಗೆ, ಇಂಡಿ ಒಕ್ಕೂಟದ ಸಂಸದರು ಹಾಗೂ ಕಾಂಗ್ರೆಸ್ ನಾಯಕರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಖಂಡಿಸಿ ಗುರುವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕಾಂಗ್ರೆಸ್ ವತಿಯಿಂದ ಪ್ರಜಾಪ್ರಭುತ್ವದ ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸೂಚನೆ ಮೇರೆಗೆ ಭಾರತೀಯ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಯ ಸಂಕಲ್ಪದೊಂದಿಗೆ, ಇಂಡಿ ಒಕ್ಕೂಟದ ಸಂಸದರು ಹಾಗೂ ಕಾಂಗ್ರೆಸ್ ನಾಯಕರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಖಂಡಿಸಿ ಗುರುವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕಾಂಗ್ರೆಸ್ ವತಿಯಿಂದ ಪ್ರಜಾಪ್ರಭುತ್ವದ ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರ ಮತ್ತು ಚುನಾವಣೆ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕ ಕೆ.ಶಂಭುಶೆಟ್ಟಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಅತ್ಯಂತ ಮಹತ್ವದ ಸ್ಥಾನ ಹೊಂದಿವೆ. ಚುನಾವಣೆ ವ್ಯವಸ್ಥೆಯ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ ಚುನಾವಣೆ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಹಾಗೂ ಸಂವಿಧಾನದ ಆಶಯದಂತೆ ಕಾರ್ಯನಿರ್ವಹಿಸಬೇಕು. ಚುನಾಯಿತ ಜನಪ್ರತಿನಿಧಿಗಳು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನು ಹೊಂದಿದ್ದಾರೆ. ಅಂತಹ ಸಂದರ್ಭದಲ್ಲಿ ಪೊಲೀಸ್ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಹದ್ದು ಎಂದು ಹೇಳಿದರು.
ಪ್ರತಿಪಕ್ಷದ ನಾಯಕರ ಧ್ವನಿಯನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಮತ್ತು ದೇಶದ ಚುನಾವಣಾ ವ್ಯವಸ್ಥೆಯ ಪಾವಿತ್ರ್ಯ ಕಾಪಾಡಲು ಕಾಂಗ್ರೆಸ್ ನಿರಂತರವಾಗಿ ಹೋರಾಟ ನಡೆಸಲಿದೆ. ಚುನಾವಣೆ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಪುನಃಸ್ಥಾಪಿಸುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಶಂಭುಶೆಟ್ಟಿ ಹೇಳಿದರು.
ಪ್ರತಿಭಟನೆಯಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ,ಬ್ಲಾಕ ಅಧ್ಯಕ್ಷ ಅಕ್ಬರ ಮುಲ್ಲಾ ಅಬ್ದುಲರಜಾಕ ಬೇಣೂರ ದ್ಯಾಮಣ್ಣ ಗಾಳಿ ಶ್ರೀದರ ನೀಲನಾಯಕ, ಬಾದಾಮಿ ಶಿವಕುಮಾರ ಹಿರೇಮಠ, ಮಹಾದೇವಗೌಡ ಪಾಟೀಲ ರಮೇಶ ತೇಲಿ, ಸುನೀಲ ಬಾಲಗಾವಿ ಜಟ್ಟಪ್ಪ ಮಾದಾಪುರ, ರೇಣುಕಾ ನ್ಯಾಮಗೌಡ, ಮಂಜುಳಾ ಭುಸಾರೇ, ಶಂಕರ ನಾಯಕ , ಕೃಷ್ಣ ಬದಾಮಿ ರೇಣುಕಾ ಸೂಳಿಕೇರಿ, ನಾಗಮಲ್ಲೇಶ್ವರಿ, ಅಭಿಷೇಕ ತಳ್ಳಿಕೇರಿ ಪ್ರಭು ಹಳ್ಳೂರ, ಪ್ರಭು ರುದ್ರಾಕ್ಷಿ ಶ್ರೀಕಾಂತ ಪೂಜಾರಿ,ಅನಿಲ ವಾಡಕರ, ಯಲ್ಲಪ್ಪ ಮೇಟಿ ಸೇರಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.