ದೋಷ ತ್ಯಜಿಸಿ, ಸಂಸ್ಕಾರಯುತ ಜೀವನ ನಡೆಸಿ: ಹೆಗ್ಗಡೆ

KannadaprabhaNewsNetwork |  
Published : Feb 16, 2026, 02:45 AM IST
 ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಪ್ರವಚನ ಮಂಟಪದಲ್ಲಿ ಪಾದಯಾತ್ರಿಗಳ ಶ್ರದ್ಧಾ-ಭಕ್ತಿಯ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿದರು. | Kannada Prabha

ಸಾರಾಂಶ

ಶಿವರಾತ್ರಿ ಸಂದರ್ಭ ಧರ್ಮಸ್ಥಳಕ್ಕೆ ಶ್ರದ್ಧಾ-ಭಕ್ತಿಯೊಂದಿಗೆ ಪಾದಯಾತ್ರೆಯಲ್ಲಿ ಬಂದ ಸಹಸ್ರಾರು ಭಕ್ತರು ತಮ್ಮಲ್ಲಿರುವ ದೋಷಗಳನ್ನೆಲ್ಲ ಇಲ್ಲೆ ತ್ಯಜಿಸಿ, ಉತ್ತಮ ಆಚಾರ-ವಿಚಾರಗಳೊಂದಿಗೆ ಸಭ್ಯ ನಾಗರಿಕರಾಗಿ ಸಂಸ್ಕಾರಯುತ ಸಾರ್ಥಕ ಜೀವನ ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.ಶನಿವಾರ ಬೆಂಗಳೂರಿನ ಗುರು ಹನುಮಂತಪ್ಪ ಸ್ವಾಮೀಜಿ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಬಂದ ಪಾದಯಾತ್ರಿಗಳನ್ನು ಪ್ರವಚನ ಮಂಟಪದಲ್ಲಿ ಅಭಿನಂದಿಸಿ ಅವರು ಮಾತನಾಡಿದರು.

ಬೆಳ್ತಂಗಡಿ: ಶಿವರಾತ್ರಿ ಸಂದರ್ಭ ಧರ್ಮಸ್ಥಳಕ್ಕೆ ಶ್ರದ್ಧಾ-ಭಕ್ತಿಯೊಂದಿಗೆ ಪಾದಯಾತ್ರೆಯಲ್ಲಿ ಬಂದ ಸಹಸ್ರಾರು ಭಕ್ತರು ತಮ್ಮಲ್ಲಿರುವ ದೋಷಗಳನ್ನೆಲ್ಲ ಇಲ್ಲೆ ತ್ಯಜಿಸಿ, ಉತ್ತಮ ಆಚಾರ-ವಿಚಾರಗಳೊಂದಿಗೆ ಸಭ್ಯ ನಾಗರಿಕರಾಗಿ ಸಂಸ್ಕಾರಯುತ ಸಾರ್ಥಕ ಜೀವನ ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.ಶನಿವಾರ ಬೆಂಗಳೂರಿನ ಗುರು ಹನುಮಂತಪ್ಪ ಸ್ವಾಮೀಜಿ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಬಂದ ಪಾದಯಾತ್ರಿಗಳನ್ನು ಪ್ರವಚನ ಮಂಟಪದಲ್ಲಿ ಅಭಿನಂದಿಸಿ ಅವರು ಮಾತನಾಡಿದರು.

ವಿಷಕಂಠನಿಂದ ಲೋಕ ಕಲ್ಯಾಣ

ವಿಷಕಂಠನಾದ ಶ್ರೀ ಮಂಜುನಾಥಸ್ವಾಮಿಗೆ ಎಲ್ಲ ದೋಷಗಳನ್ನು ಸ್ವೀಕರಿಸಿ ಲೋಕಕಲ್ಯಾಣ ಮಾಡುವ ಶಕ್ತಿ ಇದೆ. ಆದುದರಿಂದಲೇ ಅಪಘಾತದಲ್ಲಿ ಹಾಗೂ ಅಪಮೃತ್ಯುವಿನಲ್ಲಿ ಸತ್ತವರ ಮೋಕ್ಷಪ್ರಾಪ್ತಿಗಾಗಿ ಭಕ್ತರು ಧರ್ಮಸ್ಥಳಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ ಎಂದರು.ಶ್ರದ್ಧಾ-ಭಕ್ತಿಯೊಂದಿಗೆ ನಿಸ್ವಾರ್ಥವಾಗಿ ಪಾದಯಾತ್ರೆ ಮಾಡಿದಾಗ ಹೆಚ್ಚಿನ ಫಲ ಸಿಗುತ್ತದೆ. ಮಹಿಳೆಯರು ಕೂಡಾ ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಡಾ. ಹೆಗ್ಗಡೆ ನುಡಿದರು.ಧರ್ಮಸ್ಥಳದ ಭಕ್ತರ ಸೇವೆ ಮಾಡಿದರೂ ಶ್ರೀ ಸ್ವಾಮಿಯ ಸೇವೆ ಮಾಡಿದಷ್ಟೆ ಪುಣ್ಯ ಸಂಚಯವಾಗುತ್ತದೆ ಎಂಬ ಭಾವನೆಯಿಂದ ದಾರಿಯುದ್ದಕ್ಕೂ ಸಹೃದಯ ಊರಿನ ನಾಗರಿಕರು ಹಾಗೂ ಸಾರ್ವಜನಿಕರು ಪಾದಯಾತ್ರಿಗಳಿಗೆ ಎಳನೀರು, ಉಚಿತ ಪಾನೀಯ, ಹಣ್ಣು-ಹಂಪಲು, ವಸತಿ, ಊಟದ ವ್ಯವಸ್ಥೆ ಮಾಡಿ ಸಹಕರಿಸಿದ್ದಾರೆ.ಬೆಂಗಳೂರು ಭಕ್ತರ ಅನ್ನದಾಸೋಹ

ಭಕ್ತರ ಸೇವೆಯೇ ಭಗವಂತನ ಸೇವೆ ಎಂಬ ಭಾವನೆಯಿಂದ ಶನಿವಾರ ಮತ್ತು ಶಿವರಾತ್ರಿಯಂದು ಬೆಂಗಳೂರಿನ ಭಕ್ತರು ಅನ್ನಪೂರ್ಣದ ಹಿಂಭಾಗದ ಮೈದಾನದಲ್ಲಿ ಹಾಗೂ ಹೈಸ್ಕೂಲು ಕ್ರೀಡಾಂಗಣದಲ್ಲಿ ಎಲ್ಲರಿಗೂ ಅನ್ನದಾಸೋಹದ ಸೇವೆ ಮಾಡುತ್ತಿರುವುದಕ್ಕೆ ಹೆಗ್ಗಡೆ ವಿಶೇಷ ಅಭಿನಂದನೆ ಸಲ್ಲಿಸಿದರು.ಪಾದಯಾತ್ರಿಗಳ ವತಿಯಿಂದ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಗೌರವಿಸಲಾಯಿತು. ಧರ್ಮಸ್ಥಳದ ವತಿಯಿಂದ ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಮರಿಯಪ್ಪ ಅವರನ್ನು ಡಾ. ಹೆಗ್ಗಡೆ ಸನ್ಮಾನಿಸಿ ಅಭಿನಂದಿಸಿದರು.ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಮತ್ತು ಮರಿಯಪ್ಪ ಉಪಸ್ಥಿತರಿದ್ದು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವನವೈಭವ... ಬತ್ತಿದ ಜಲಮೂಲ ಪುನಶ್ಚೇತನಕ್ಕೆ ಅರಣ್ಯಇಲಾಖೆ ಹೊಸ ಯೋಜನೆ
‘ಕನ್ನಡಪ್ರಭ’ ಸಂಪಾದಕ ಜೋಗಿ, ಕಬ್ಬಿನಾಲೆಗೆ ‘ಮಹಾಬಲ’ ಪ್ರಶಸ್ತಿ