೫೦ ಜನ ಪಾನಮುಕ್ತರಾದಲ್ಲಿ ೧ ವರ್ಷದಲ್ಲಿ ಅವರಿಗೆ ಒಟ್ಟು ೧ ಕೋಟಿ ರು.ಗೂ ಹೆಚ್ಚು ಉಳಿತಾಯ ಆಗುತ್ತಿದೆ. ಆದರೆ ಇದರಿಂದ ನಷ್ಟ ಆಗುವವರು ಮದ್ಯವರ್ಜನ ಶಿಬಿರವನ್ನು ದೂಷಿಸುತ್ತಾರೆ. ಇದಕ್ಕೆ ನಾವು ಹೆದರಬಾರದು. ಯಾರೋ ಬೈಯುತ್ತಾರೆ ಎಂದು ಮದ್ಯವರ್ಜನ ಶಿಬಿರ ನಿಲ್ಲಿಸುವುದಿಲ್ಲ ಎಂದು ಹೇಳಿದ ಅವರು, ಮದ್ಯವರ್ಜನ ಶಿಬಿರ ಮುಗಿದ ಮೇಲೆ ಹಳೆಯ ಸ್ನೇಹಿತರು ಕರೆದರೂ ಹೋಗಬಾರದು. ಒಮ್ಮೆ ತಪ್ಪು ಮಾಡಿ ನೋವು ಅನುಭವಿಸಿದ್ದೀರಿ. ಮತ್ತೆ ಜಾಗೃತರಾಗಿರಿ ಎಂದರು.
ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ರೆ.ಫಾ.ವರ್ಗೀಸ್ ಕೈಪನಡ್ಕ ಮಾತನಾಡಿ, ಒತ್ತಡ, ನಿರಾಸೆ ಸಹಿತ ಹಲವಾರು ಕಾರಣಗಳಿಂದ ಆರಂಭಗೊಂಡ ಮದ್ಯಪಾನ ಮುಂದೆ ಮದ್ಯ ವ್ಯಸನಕ್ಕೆ ಕಾರಣವಾಗುತ್ತಿದೆ ಎಂದರು. ಪುತ್ತೂರು ಎಸ್‌ಆರ್‌ಕೆ ಲ್ಯಾಡರ್ಸ್ ಮಾಲೀಕ ಕೇಶವ ಅಮೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇದರ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಇದರ ಗೌರವಾಧ್ಯಕ್ಷ ಶ್ರೀಧರ ಗೋರೆ, ಶಿಬಿರದ ವೈದ್ಯಾಧಿಕಾರಿ ಡಾ. ಮೋಹನ್‌ದಾಸ್ ಗೌಡ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದ.ಕ.-೨ ಇದರ ನಿರ್ದೇಶಕ ಬಾಬು ನಾಯ್ಕ, ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಇದ್ದರು. ಶಿಬಿರಾರ್ಥಿ ಸುರೇಶ್ ಅನಿಸಿಕೆ ವ್ಯಕ್ತಪಡಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಇದರ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ಸ್ವಾಗತಿಸಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು ವಂದಿಸಿದರು. ಶಿವಪ್ರಸಾದ್ ರೈ ಮೈಲೇರಿ, ರವಿಪ್ರಸಾದ್ ಆಲಾಜೆ ನಿರೂಪಿಸಿದರು. ಅಶೋಕ ಆಚಾರ್ಯ ಬಲ್ಯ ಪ್ರಾರ್ಥಿಸಿದರು.