ನೆನಗುದಿಗೆ ಬಿದ್ದಿದ್ದ ಸಂಪರ್ಕ ರಸ್ತೆ ಕಾಮಗಾರಿಗೆ ದರ್ಶನ್ ಪುಟ್ಟಣ್ಣಯ್ಯ ಚಾಲನೆ

KannadaprabhaNewsNetwork |  
Published : Jun 23, 2026, 01:45 AM IST
22ಕೆಎಂಎನ್ ಡಿ14 | Kannada Prabha

ಸಾರಾಂಶ

ರಸ್ತೆಯೂ ಒತ್ತುವರಿಯಾದ ಕಾರಣ ಅದನ್ನು ಸರ್ವೇ ಮಾಡಿಸಿ ರಸ್ತೆಯನ್ನು 9 ಮೀಟರ್ ಅಗಲದ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಉಳಿದಂತೆ ಚಿಕ್ಕಮರಳಿ ಗ್ರಾಮದಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆಯನ್ನು ಸಹ ಶೀಘ್ರವೇ ಅಭಿವೃದ್ಧಿ ಪಡಿಸಲಾಗುವುದು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಕಳೆದ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ತಾಲೂಕಿನ ಚಿಕ್ಕಮರಳಿ ಗ್ರಾಮದ ಸಂಪರ್ಕ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯಿಂದ 1.55 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು. ಮಂಡ್ಯ-ಪಾಂಡವಪುರ ಮುಖ್ಯರಸ್ತೆಯಿಂದ ಚಿಕ್ಕಮರಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಕಳೆದ ಹಲವು ವರ್ಷಗಳಿಂದ ಗುಂಡಿಬಿದ್ದು ಅಧ್ವಾನಗೊಂಡಿತ್ತು. ಹಾಗಾಗಿ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಗ್ರಾಮಸ್ಥರು ಹಲವಾರು ಬಾರಿ ಒತ್ತಾಯಿಸಿದ್ದರು ಎಂದರು.

ಆ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿ ಮಡಿಕೆ ಪಟ್ಟಣ ಗೇಟ್‌ಯಿಂದ ಚಿಕ್ಕಮರಳಿ ವರೆಗೆ 1.45 ಕಿಮೀ ಉದ್ದದ ರಸ್ತೆಯ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಲಾಗಿದೆ ಎಂದರು.

ರಸ್ತೆಯೂ ಒತ್ತುವರಿಯಾದ ಕಾರಣ ಅದನ್ನು ಸರ್ವೇ ಮಾಡಿಸಿ ರಸ್ತೆಯನ್ನು 9 ಮೀಟರ್ ಅಗಲದ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಉಳಿದಂತೆ ಚಿಕ್ಕಮರಳಿ ಗ್ರಾಮದಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆಯನ್ನು ಸಹ ಶೀಘ್ರವೇ ಅಭಿವೃದ್ಧಿ ಪಡಿಸಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಗ್ರಾಮಸ್ಥರು ಗ್ರಾಮದಲ್ಲಿ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಮೂಡಲೋಣಿ ರಸ್ತೆಯನ್ನು ಅಭಿವೃದ್ಧಿ ಪಡಿಸಿಕೊಡುವಂತೆ ಹಾಗೂ ಅರ್ಧಕ್ಕೆ ನಿಂತಿರುವ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿ ಹಾಗೂ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಎಇಇ ಜೈಕುಮಾರ್, ಪಿಡಿಒ ರಾಜೇಂದ್ರ, ಕಾರ್ಯದರ್ಶಿ ಜಯರಾಮ್, ಗ್ರಾಪಂ ಮಾಜಿ ಅಧ್ಯಕ್ಷ ಸಿ.ಬಿ.ತಮ್ಮಣ್ಣ, ಮಾಜಿ ಉಪಾಧ್ಯಕ್ಷ ಈರಾಚಾರಿ, ಮುಖಂಡರಾದ ಸಿ.ಸ್ವಾಮೀಗೌಡ, ಪ್ರಕಾಶ್, ಸಿ.ಬಿ.ಸ್ವಾಮೀಗೌಡ, ಬಲರಾಮೇಗೌಡ, ಜಯರಾಮು, ರಘು, ನಾರಾಯಣ(ಸಣ್ಣ), ಸಿ.ಬಿ.ಶಂಕರ, ಸುರೇಶ್, ಕೆಂಪಶೆಟ್ಟಿ, ಕಿರಣ್, ಮಧುಸೂದನ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದರ್ಶನ್‌ ಪತ್ನಿ ನಿಂದಕರಿಗೆ ಜೈಲೇ ಗತಿ
ಅಂಕೇಗೌಡರ ಸಂಗ್ರಹಿಸಿರುವ ಪುಸ್ತಕಗಳಿಗೆ ಸೂಕ್ತ ಜಾಗ, ಕಟ್ಟಡ ವ್ಯವಸ್ಥೆ: ಸಿಎಂ ಸೂಚನೆ