ಕನ್ನಡಪ್ರಭ ವಾರ್ತೆ ಪಾಂಡವಪುರ
ಬಳಿಕ ಮಾತನಾಡಿದ ಶಾಸಕರು, ರೈಲ್ವೆ ನಿಲ್ದಾಣದಿಂದ ಕೆ.ಆರ್.ಪೇಟೆ ಗಡಿ ಭಾಗದ ರಸ್ತೆ ಸಂಪೂರ್ಣ ಹಾಳಾಗಿ ವಾಹನ ಸಂಚಾರ ದುಸ್ತರವಾಗಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನ ಪಡೆದುಕೊಳ್ಳಲಾಗಿದೆ ಎಂದರು.
ರಸ್ತೆ ಅಭಿವೃದ್ಧಿಗೆ ಸರ್ಕಾರ 5 ಕೋಟಿ ರು. ಅನುದಾನ ಮಂಜೂರು ಮಾಡಿದೆ. ಈ ಅನುದಾನದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಜೊತೆಗೆ ಒಂದು ಪದರ ಡಾಂಬರು ಹಾಕಲಾಗುವುದು. ಕಾಮಗಾರಿ ಗುಣಮಟ್ಟ ಕಾಯ್ದುಕೊಂಡು ಶೀಘ್ರ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.ಪಾಂಡವಪುರದಿಂದ ಮಂಡ್ಯಕ್ಕೆ ತೆರಳುವ ಮುಖ್ಯ ರಸ್ತೆ ಕೂಡ ಹದಗೆಟ್ಟಿದ್ದು, ಈ ರಸ್ತೆ ಅಭಿವೃದ್ಧಿಗೂ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದಷ್ಟು ಬೇಗ ಹಣ ಬಿಡಗಡೆಯಾಗಲಿದೆ. ಪಾಂಡವಪುರದಿಂದ ದೊಡ್ಡ ಬ್ಯಾಡರಹಳ್ಳಿವರೆಗಿನ ರಸ್ತೆ ಡಾಂಬರೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಈ ರಸ್ತೆ ಕಿರಿದಾಗಿದಾಗಿದ್ದು, ವಾಹನ ಸಂಚಾರ ಕಷ್ಟಕರವಾಗಿದೆ. ಹೀಗಾಗಿ, ರಸ್ತೆ ಅಗಲೀಕರಣ ಆಗಬೇಕಿದೆ. ಈ ಬಗ್ಗೆಯೂ ಸರ್ಕಾರದ ಗಮನ ಸೆಳೆದು ಆದಷ್ಟು ಬೇಗ ರಸ್ತೆ ಡಾಂಬರೀಕರಣ ಮಾಡಲಾಗುವುದು ಎಂದರು.
ಈ ವೇಳೆ ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ಕೆನ್ನಾಳು ವಿಜಯಕುಮಾರ್, ಮಾಜಿ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಎಣ್ಣೆಹೊಳೆಕೊಪ್ಪಲು ಮಂಜು, ಮುಖಂಡರಾದ ವೈ.ಜಿ.ರಘು, ಮಾಖೇಗೌಡ, ಶಿವಣ್ಣ, ಗುತ್ತಿಗೆದಾರ ಅಶೋಕ್ ಇತರರು ಇದ್ದರು.ಆ.19 ರಂದು ವಿದ್ಯುತ್ ವ್ಯತ್ಯಯ
ಮಂಡ್ಯ:ತಾಲೂಕಿನ ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಆಗಸ್ಟ್ 19 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕೆರಗೋಡು, ದೊಡ್ಡಗರುಡನಹಳ್ಳಿ, ಬಿಳಿದೇಗಲು, ಮುದಗಂದೂರು, ಮಾರಗೌಡನಹಳ್ಳಿ, ಬಿ.ಹೊಸೂರು, ಹಂಪಾಪುರ, ಕಲ್ಮಂಟಿದೊಡ್ಡಿ, ಸೌದೇನಹಳ್ಳಿ, ಬೆಟ್ಟಹಳ್ಳಿ, ಬೀಚನಹಳ್ಳಿ, ಪುರದಕೊಪ್ಪಲು, ಎಂ.ಹೊನ್ನೇನಹಳ್ಳಿ , ಬಿದರಕಟ್ಟೆ, ಬೆನ್ನಹಟ್ಟಿ, ಮನುಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.