ಪಂಚಭೂತೇಶ್ವರ ಪೀಠದಲ್ಲಿ ಡಿ.14,15 ರಂದು ದಶಮಾನೋತ್ಸವ, ಧಾರ್ಮಿಕ ಸಮ್ಮೇಳನ

KannadaprabhaNewsNetwork |  
Published : Dec 13, 2024, 12:48 AM IST
12ಕೆಎಂಎನ್ ಡಿ13 | Kannada Prabha

ಸಾರಾಂಶ

ಡಿ.14ರಂದು ಹುಣಸೂರಿನ ದೇವನೂರು ಮಹಾಸಂಸ್ಥಾನ ಮಠದ ಮಾದೇಶ್‌ ಗುರೂಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಹನುಮಂತನಾಥ ಸ್ವಾಮೀಜಿ, ಶಂಭುನಾಥ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ ನೇತೃತ್ವದಲ್ಲಿ ಗಣಪತಿ ಹೋಮ, ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಯಲಿವೆ.

ಕನ್ನಡಪ್ರಭ ವಾರ್ತೆ ಕಿಕ್ಕೇರಿ

ಸಮೀಪದ ಬೆಡದಹಳ್ಳಿ ಪಂಚಭೂತೇಶ್ವರ ಕ್ಷೇತ್ರದಲ್ಲಿ ಡಿ.14 ಹಾಗೂ 15ರಂದು ದಶಮಾನೋತ್ಸವ ಸಂಭ್ರಮದ ಅಂಗವಾಗಿ ಧಾರ್ಮಿಕ ಸಮ್ಮೇಳನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಪಂಚಶ್ರೀ ಪ್ರಶಸ್ತಿ ಪ್ರದಾನ, ಪೌರ ಕಾರ್ಮಿಕರು ಹಾಗೂ ಹಿರಿಯ ನಾಗರಿಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಸುಕ್ಷೇತ್ರದ ಪೀಠಾಧ್ಯಕ್ಷ ರುದ್ರಮುನಿ ಸ್ವಾಮೀಜಿ ಮಾತನಾಡಿ, ಡಿ.14ರಂದು ಹುಣಸೂರಿನ ದೇವನೂರು ಮಹಾಸಂಸ್ಥಾನ ಮಠದ ಮಾದೇಶ್‌ ಗುರೂಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಹನುಮಂತನಾಥ ಸ್ವಾಮೀಜಿ, ಶಂಭುನಾಥ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ ನೇತೃತ್ವದಲ್ಲಿ ಗಣಪತಿ ಹೋಮ, ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಯಲಿವೆ ಎಂದರು.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸುವರು. ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆ ವಹಿಸುವರು. ಬಾಳೆಹೊನ್ನೂರು ಶಾಖಾಮಠ ತೆಂಡೆಕೆರೆ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಶಿವಬಸವ ಸ್ವಾಮೀಜಿ ಹಾಗೂ ಬೇಬಿ ಮಠದ ರಾಮಯೋಗೀಶ್ವರ ಮಠ ಭಾಗವಹಿಸಲಿದ್ದಾರೆ ಎಂದರು.

ಡಿ.15ರಂದು ಧಾರ್ಮಿಕ ಸಮ್ಮೇಳನ ಜಾಗೃತಿ ಸಮಾವೇಶದಲ್ಲಿ ಶ್ರೀಮುನಿರಂಜನಪ್ರಣವಸ್ವರೂಪಿ ಆದಿಚುಂಚನಗಿರಿ ಕ್ಷೇತ್ರದ ನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಕೋಡಿಮಠದ ಶಿವಯೋಗಿ ರಾಜೇಂದ್ರ ಮಹಾ ಸ್ವಾಮೀಜಿ, ಶ್ರವಣಬೆಳಗೊಳ ಜೈನ ಕ್ಷೇತ್ರದ ಚಾರುಕೀರ್ತಿ ಪಂಡಿತಾಚಾರ್ಯ ಭಟ್ಟಾರಕ ಸ್ವಾಮೀಜಿ, ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದ ಪುರುಷೋತ್ತಮನಂದನಾಥ ಸ್ವಾಮೀಜಿ, ಕಾಗಿನೆಲೆ ಕನಕ ಗುರುಪೀಠ ಕೃಷ್ಣರಾಜನಗರ ಶಾಖಾಮಠದ ಶಿವಾನಂದಪುರಿ ಸ್ವಾಮೀಜಿ, ಚಂದ್ರವನ ಆಶ್ರಮದ ತ್ರಿನೇತ್ರಮಹಾಂತ ಶಿವಯೋಗಿ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದಾರೆ ಎಂದರು.

ಸಮಾರಂಭದಲ್ಲಿ ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್‌ ಭಾಗವಹಿಸಲಿದ್ದಾರೆ. ಮದ್ದೂರು ವಿಕಲಚೇತನ ಒಲಂಪಿಕ್‌ ಕ್ರೀಡಾಪಟು ರಾಜಣ್ಣ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣಗೌಡ, ಆರ್‌ಟಿಒ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್, ಧ್ವನಿ ಮಹಿಳಾ ಸಂಸ್ಥೆ ಮಹಿಳಾ ಹೋರಾಟಗಾರ್ತಿ ರಜನಿರಾಜ್, ಸಮಾಜ ಸೇವಕ ಮೊಟ್ಟೆ ಮಂಜು ಅವರಿಗೆ ಪಂಚಶ್ರೀ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಠದ ಕಾರ್ಯದರ್ಶಿ ಕಾಂತರಾಜು, ತಾಲೂಕು ಬಿಜೆಪಿ ಉಪಾಧ್ಯಕ್ಷ ಭಾರತೀಪುರ ಪುಟ್ಟಣ್ಣ ಇದ್ದರು.

PREV

Recommended Stories

ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!