ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಸಮಿತಿಯ ಕಾರ್ಯಕರ್ತರು ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು.
ಪರಿಶಿಷ್ಟರಿಗೆ ಒಳ ಮೀಸಲಾತಿ ಜಾರಿಗಾಗಿ ಸುದೀರ್ಘ ಹೋರಾಟ ನಡೆದರೂ ರಾಜ್ಯವನ್ನಾಳಿದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರಗಳು ಒಳ ಮೀಸಲು ಜಾರಿಗೆ ಇಚ್ಛಾಸಕ್ತಿ ತೋರಲಿಲ್ಲ. ಇದೀಗ ಸರ್ವೋಚ್ಚ ನ್ಯಾಯಾಲಯ ಒಳ ಮೀಸಲಾತಿ ಜಾರಿಗೆ ಸಮ್ಮತಿಸಿರುವುದು ಸ್ವಾಗತಾರ್ಹ, ರಾಜ್ಯ ಸರ್ಕಾರ ಅನವಶ್ಯಕವಾಗಿ ಉಪಸಮಿತಿ ರಚನೆ ನಾಟಕವನ್ನಾಡದೆ ನ್ಯಾ.ಎ.ಜೆ ಸದಾಶಿವ ಆಯೋಗದ ವರದಿ ಹಾಗೂ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯ ಎಚ್.ಕಾಂತರಾಜು ವರದಿ ಆದರಿಸಿ ಪರಿಶಿಷ್ಟರ ಮೀಸಲು ನೀತಿ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿದರು.ಸರ್ವೋಚ್ಚ ನ್ಯಾಯಾಲಯ ತೀರ್ಪಿನಲ್ಲಿ ಪರಿಶಿಷ್ಟರ ಮೀಸಲಾತಿ ನೀತಿಯಲ್ಲಿ ಕ್ರಿಮಿಲೇಯರ್ ಪದ್ಧತಿ ಅಳವಡಿಸಲು ಸಂವಿಧಾನ ಪೀಠದ ಬಹುತೇಕ ನ್ಯಾಯಾಧೀಶರು ಸೂಚಿಸಿದ್ದು ರಾಜ್ಯ ಸರ್ಕಾರ ವೈಜ್ಞಾನಿಕ ಮಾನದಂಡ ಅನುಸರಿಸಿ ಕ್ರೀಮಿ ಲೇಯರ್ ಪದ್ಧತಿ ಅಳವಡಿಸಬೇಕು ಎಂದು ಒತ್ತಾಯಿಸಿದರು.