ರಂಗಪಟ್ಟಣ ದಸರಾ ಸೇರಿದಂತೆ ಇನ್ನಿತರ ಸರ್ಕಾರಿ ಕಾರ್ಯಕ್ರಮಗಳಿಗೆ ಸ್ಥಳೀಯ ಛಾಯಾಗ್ರಾಹಕರು ಹಾಗೂ ವಿಡಿಯೋಗ್ರಾಫರ್‌ಗಳನ್ನು ಕಡೆಗಣಿಸಿರುವುದು ಸರಿಯಲ್ಲ. ತಾಲೂಕು ಆಡಳಿತ, ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡದೆ ಹೊರ ಭಾಗದ ಅನ್ಯರಿಗೆ ಇವರೇ ಮಣೆ ಹಾಕಿದೆ ಎಂದು ಆಕ್ರೋಶ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ದಸರಾ ಕಾರ್ಯಕ್ರಮಗಳಿಗೆ ಸ್ಥಳೀಯ ಛಾಯಾಗ್ರಾಹಕರು ಹಾಗೂ ವಿಡಿಯೋಗ್ರಾಫರ್‌ಗಳನ್ನು ಕಡೆಗಣಿಸಿರುವುದುನ್ನು ಖಂಡಿಸಿ ಕ್ಷೇತ್ರದ ಶಾಸಕ ಹಾಗೂ ಅಧಿಕಾರಿಗಳ ವಿರುದ್ಧ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿದ ಸದಸ್ಯರು, ಕಚೇರಿ ಮುಂಭಾಗ ಕೆಲ ಕಾಲಧರಣಿ ನಡೆಸಿ ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿದರು.
ಸಂಘದ ತಾಲೂಕು ಅಧ್ಯಕ್ಷ ದೀಪು ಮಿಂಚು ಮಾತನಾಡಿ, ಶ್ರೀರಂಗಪಟ್ಟಣ ದಸರಾ ಸೇರಿದಂತೆ ಇನ್ನಿತರ ಸರ್ಕಾರಿ ಕಾರ್ಯಕ್ರಮಗಳಿಗೆ ಸ್ಥಳೀಯ ಛಾಯಾಗ್ರಾಹಕರು ಹಾಗೂ ವಿಡಿಯೋಗ್ರಾಫರ್‌ಗಳನ್ನು ಕಡೆಗಣಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಆಡಳಿತ, ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡದೆ ಹೊರ ಭಾಗದ ಅನ್ಯರಿಗೆ ಇವರೇ ಮಣೆ ಹಾಕಿ ಛಾಯಾಚಿತ್ರ ಹಾಗೂ ವಿಡಿಯೋಗಳ ತೆಗೆಯಲು ಅನುಮತಿ ನೀಡಿರುವುದನ್ನು ಖಂಡಿಸಿದರು.
ಕೂಡಲೇ ತಾಲೂಕು ಆಡಳಿತ ಸ್ಥಳೀಯರಿಗೆ ದಸರಾ ಕಾರ್ಯಕ್ರಮಗಳ ಛಾಯಾಗ್ರಪಿ ಹಾಗೂ ವಿಡಿಯೋ ಮಾಡಲು ಅನುಮತಿ ನೀಡಬೇಕು. ಇಲ್ಲದಿದ್ದರೆ ದಸರಾ ಆಚರಣೆ ಮತ್ತು ಕಾರ್ಯಕ್ರಮಗಳಲ್ಲಿ ಕಪ್ಪುಪಟ್ಟಿ ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿ ತಹಸೀಲ್ದಾರ್ ಚೇತನ ಯಾದವ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಚೇತನಾ ಯಾದವ್, ತಮ್ಮ ಅರ್ಜಿಯನ್ನು ಪರಿಶೀಲಸಿ ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದರು. ಇದಕ್ಕೂ ಮುನ್ನ ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಕುವೆಂಪು ವೃತ್ತದಿಂದ ಬ್ಯಾನರ್ ಹಿಡಿದು ಪಟ್ಟಣದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿ, ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಚೊಟ್ಟನಹಳ್ಳಿ ದೀಪು, ಕಾರ್ಯದರ್ಶಿ ಶಶಿಧರ್, ಸಹ ಕಾರ್ಯದರ್ಶಿ, ರವಿ ಕುಮಾರ್, ವಿನಯ್, ಸ್ವಾಮಿ, ಚಂದ್ರು, ಫೋಟೋ ರವಿ, ಕೆ.ಆರ್.ಎಸ್ ದೀಪಕ್, ಬಿ.ಸಿ ಸಂತೋಷ್‌ಕುಮಾರ್, ಕೀರ್ತಿ, ಮನು, ರಾಜು ಸೇರಿದಂತೆ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.