ಕನ್ನಡಪ್ರಭ ವಾರ್ತೆ ಮೈಸೂರು
ಚಾಮುಂಡಿಬೆಟ್ಟದಲ್ಲಿ ಭಾನುವಾರ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದಸರಾ ಯಾವುದೇ ಒಂದು ಧರ್ಮ ಅಥವಾ ಜಾತಿಗೆ ಸೀಮಿತವಾದ ಹಬ್ಬವಲ್ಲ. ಇದು ಕರ್ನಾಟಕದ ಸಮಸ್ತ ಜನರನ್ನು ಒಗ್ಗೂಡಿಸುವ, ನಾಡಿನ ವೈವಿಧ್ಯಮಯ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಮಹೋತ್ಸವವಾಗಿದೆ ಎಂದರು.
ನಾಡಿನ ಶರಣರು, ಸಂತರು ಹಾಗೂ ಧಾರ್ಮಿಕ ಮುಖಂಡರ ಆಶೀರ್ವಾದದೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಮೈಸೂರಿನ ಜನತೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಜನರು ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.ರಾಜ್ಯ ಸರ್ಕಾರವು ಜನಪರ ಆಡಳಿತಕ್ಕೆ ಆದ್ಯತೆ ನೀಡಿದ್ದು, ಐದು ಗ್ಯಾರಂಟಿ ಯೋಜನೆಗಳೂ ಸೇರಿದಂತೆ ವಿವಿಧ ಜನಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಬದ್ಧವಾಗಿದೆ. ಜನರ ಕಲ್ಯಾಣ, ಸಾಮಾಜಿಕ ನ್ಯಾಯ ಹಾಗೂ ರಾಜ್ಯದ ಅಭಿವೃದ್ಧಿ ಸರ್ಕಾರದ ಪ್ರಮುಖ ಆದ್ಯತೆಗಳಾಗಿವೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಕ್ಕೆ ಹೊಸ ಚೈತನ್ಯ ಮತ್ತು ಉತ್ಸಾಹ ತಂದುಕೊಟ್ಟಿದ್ದಾರೆ. ತಮ್ಮ ಆಡಳಿತದ 125 ದಿನಗಳಲ್ಲಿ ಯಾವ ಸಿಎಂ ಮಾಡದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಬಹಳ ದೂರದೃಷ್ಟಿ ಇಟ್ಟು ಕೊಂಡು ಆಡಳಿತ ಮಾಡುತ್ತಿದ್ದಾರೆ ಎಂದರು.