ದಸರಾ: ಗಜಪಡೆಗೆ ಶಾಸಕ ಚನ್ನಬಸಪ್ಪ ವಿಶೇಷ ಪೂಜೆ

KannadaprabhaNewsNetwork |  
Published : Oct 09, 2026, 01:30 AM IST
ಪೋಟೋ: 08ಎಸ್‌ಎಂಜಿಕೆಪಿ10ಶಿವಮೊಗ್ಗ ತಾಲೂಕು ಸಕ್ರೆಬೈಲು ಆನೆ ಬಿಡಾರದಲ್ಲಿ ಗುರುವಾರ ಶಿವಮೊಗ್ಗ ದಸರಾ ಮೆರವಣಿಗೆಗೆ ಸಜ್ಜಾಗುತ್ತಿರುವ ಗಜಪಡೆಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಗುರುವಾರ ಪೂಜೆ ಸಲ್ಲಿಸಿ ಬರಮಾಡಿಕೊಂಡರು. | Kannada Prabha

ಸಾರಾಂಶ

ಮೈಸೂರು ಮಾದರಿಯಲ್ಲಿ ನಡೆಸುವ ಮಲೆನಾಡಿನ ಸಾಂಸ್ಕೃತಿಕ ಶಿವಮೊಗ್ಗ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಸಜ್ಜಾಗುತ್ತಿರುವ ಗಜಪಡೆಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಗುರುವಾರ ಸಕ್ರೆಬೈಲು ಆನೆ ಬಿಡಾರದಲ್ಲಿ ಪೂಜೆ ಸಲ್ಲಿಸಿ ಬರಮಾಡಿಕೊಂಡರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮೈಸೂರು ಮಾದರಿಯಲ್ಲಿ ನಡೆಸುವ ಮಲೆನಾಡಿನ ಸಾಂಸ್ಕೃತಿಕ ಶಿವಮೊಗ್ಗ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಸಜ್ಜಾಗುತ್ತಿರುವ ಗಜಪಡೆಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಗುರುವಾರ ಸಕ್ರೆಬೈಲು ಆನೆ ಬಿಡಾರದಲ್ಲಿ ಪೂಜೆ ಸಲ್ಲಿಸಿ ಬರಮಾಡಿಕೊಂಡರು.

ದಸರಾ ಮೆರವಣಿಗೆಯಲ್ಲಿ ತಾಯಿ ಶ್ರೀ ಚಾಮುಂಡೇಶ್ವರಿಯ ಮಂಗಳ ಮೂರ್ತಿಯ ಅಂಬಾರಿಯನ್ನು ಹೊರಲಿರುವ ಆನೆಗಳು ಸೇರಿದಂತೆ ಗಜಪಡೆಗೆ ಹಣ್ಣು-ಹಂಪಲುಗಳನ್ನು ನೀಡಿ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಶಾಸಕರು, ಶಿವಮೊಗ್ಗ ದಸರಾ ಜಂಬೂಸವಾರಿಗೆ ಸಕ್ರೆಬೈಲು ಆನೆ ಬಿಡಾರದ ಗಜಪಡೆಯೇ ಪ್ರಮುಖ ಕಳೆ ಹಾಗೂ ಆಕರ್ಷಣೆ. ಯಾವುದೇ ಲೋಪವಿಲ್ಲದೆ ಉತ್ಸವ ಅತ್ಯಂತ ವೈಭವ ಹಾಗೂ ಶಿಸ್ತುಬದ್ಧವಾಗಿ ನೆರವೇರಲು ದೇವರಲ್ಲಿ ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆನೆಗಳ ಆರೋಗ್ಯ ತಪಾಸಣೆ, ಪೌಷ್ಟಿಕ ಆಹಾರ ಪೂರೈಕೆ ಹಾಗೂ ನಗರದಲ್ಲಿ ನಡೆಯಲಿರುವ ತಾಲೀಮಿನ ಕುರಿತು ಅಧಿಕಾರಿಗಳು ಮತ್ತು ಮಾವುತರೊಂದಿಗೆ ಶಾಸಕರು ಚರ್ಚಿಸಿದರು. ನಗರದ ಸಮಸ್ತ ಜನತೆ ಈ ಸಾಂಸ್ಕೃತಿಕ ಮಹೋತ್ಸವದಲ್ಲಿ ಸಂಭ್ರಮದಿಂದ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣಗೌಡ, ವನ್ಯಜೀವಿ ವಿಭಾಗದ ಡಿಸಿಎಫ್‌ ಪ್ರಸನ್ನಕೃಷ್ಣ ಪಟೇಗಾರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ಉಪಾಧ್ಯಕ್ಷರುಗಳಾದ ಜ್ಞಾನೇಶ್ವರ್, ನಾಗರಾಜ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಮಹಾನಗರ ಪಾಲಿಕೆಯ ಮಾಜಿ ಸದಸ್ಯರು ಸೇರಿದಂತೆ ಪಾಲಿಕೆಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಭಾಜಪದ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ
ಚನ್ನಗಿರಿಯಲ್ಲಿ ಫ್ರೀ ಫೈರ್‌ ಗೇಮ್‌ಗೆ ಅಪ್ರಾಪ್ತ ಬಲಿ!