ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸಂಜೆ ಮುತ್ತಪ್ಪ ದೇವರ ಮಲೆ ಇಳಿಸುವಿಕೆ ನಡೆಯಿತು. ನಂತರ ರಾತ್ರಿ 10 ಗಂಟೆಯವರೆಗೂ ಮುತ್ತಪ್ಪ ವೆಳ್ಳಾಟಂ ನಡೆಯಿತು.
ಹೋಬಳಿ ವ್ಯಾಪ್ತಿಯ ಕೆದಕಲ್, ಏಳನೇ ಹೊಸಕೋಟೆ, ಕೊಡಗರಹಳ್ಳಿ, ಅತ್ತೂರು, ಬಾಳೆಕಾಡು, ಶ್ರೀದೇವಿಗಳಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಭಕ್ತರು ದೇವರಲ್ಲಿ ಬೇಡಿಕೆ ಮತ್ತು ಹರಕೆ ಸಲ್ಲಿಸಿದರು.ರಾತ್ರಿ ಕುಂದನ್ ನೃತ್ಯಾಲಯ ತಂಡದಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ದೇವಾಲಯ ಸಮಿತಿಯ ಪಟ್ಟೆಮನೆ ಉದಯಕುಮಾರ್, ರಮೇಶ್ ಪಿಳ್ಳೈ ಜಿ.ಪಿ.ಅನಿಲ್ ಕುಮಾರ್, ಯಂಕನ ಕೌಶಿಕ್, ಮುತ್ತಪ್ಪ ದೇವಾಲಯದ ಪೂಜಾರಿ ಶಿವರಾಮು, ಚಾಮುಂಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಮಂಜುನಾಥ್ ಉಡುಪ ಸೇರಿದಂತೆ ಸಮಿತಿ ಸದಸ್ಯರು ಇದ್ದರು.