ದಾವಣಗೆರೆ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಗುರುವಾರ ಹರಿಹರ ತಾಲೂಕಿನ ಮಿಟ್ಲಕಟ್ಟೆ, ಕೆ.ಬೇವಿನಹಳ್ಳಿ ಹಾಗೂ ಜಗಳೂರು ತಾಲೂಕಿನ ಹಿರೇ ಅರಕೆರೆ ಹಾಗೂ ಗುತ್ತಿದುರ್ಗ ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲಿಸಿದರು.
ಮಕ್ಕಳಿಗೆ ಮೂಲಸೌಕರ್ಯಗಳನ್ನು ಒದಗಿಸುವಂತೆ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. 15 ದಿನಗಳೊಳಗಾಗಿ ಆಯೋಗಕ್ಕೆ ಈ ಬಗ್ಗೆ ವರದಿ ನೀಡಲು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜನಾಯ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್., ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.