ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ದಕ್ಷಿಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ವಿಸ್ತಾರಕರಿಗೆ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತದೊಂದಿಗೆ ಗೆದ್ದು, ಅಧಿಕಾರಕ್ಕೆ ಬರುವುದು ಖಚಿತ. ಆದರೆ, ಅದಕ್ಕೊಂದು ಷರತ್ತು ಸಹ ಇದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲೇಬೇಕು. ದಾವಣಗೆರೆ ದಕ್ಷಿಣ ಕ್ಷೇತ್ರವನ್ನು ಗೆಲ್ಲಲೇಬೇಕೆಂಬ ಬಗ್ಗೆ ನಿಮಗೆಲ್ಲರಿಗೂ ಅರಿವು ಇರಬೇಕು ಎಂದು ಕಿವಿಮಾತು ಹೇಳಿದರು.ಉಪಚುನಾವಣೆಗೆ ನಮ್ಮ ಮುಂದೆ ಕಾಲಾವಕಾಶ ಸಾಕಷ್ಟು ಕಡಿಮೆ ಇದೆ. ಕೇವಲ ಒಂದೇ ತಿಂಗಳಷ್ಟೇ ಉಳಿದಿದೆ. ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಉಪ ಚುನಾವಣೆ ಮುಗಿಯುವವರೆಗೂ ಬೂತ್ ಬಿಟ್ಟು ಕದಲಬಾರದು. ಕಮಲದ ಗುರುತು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗಾಗಿ ನೀವೆಲ್ಲರೂ ಕೆಲಸ ಮಾಡಬೇಕು. ಬಿಜೆಪಿಯಲ್ಲಿ ದೊಡ್ಡ ಮಟ್ಟದ ಕಾರ್ಯಕರ್ತರಿದ್ದಾದರೆ. ಇಷ್ಟೊಂದು ಸಂಖ್ಯೆಯಲ್ಲಿದ್ದರೂ ನಾವು ಸೋತರೆ ಅದು ನಾಚಿಕೆಗೇಡಿನ ವಿಷಯವಾಗುತ್ತದೆ ಎಂದು ಎಚ್ಚರಿಸಿದರು.
ವುದೇ ಬಿಜೆಪಿ ಕಾರ್ಯಕರ್ತರಿಗೆ ನೀಡುವ ಅವಕಾಶ, ಪ್ರೋತ್ಸಾಹಕ್ಕೆ ಸಾಕ್ಷಿಯಾಗಿದೆ. ಮೋದಿಯವರು ಪ್ರಧಾನಿಯಾಗಿ 12 ವರ್ಷಗಳಾಗಿದ್ದು, ಯಾವುದೇ ಭ್ರಷ್ಟಾಚಾರದ ಆರೋಪ ಕೇಂದ್ರದ ಮೇಲಾಗಲಿ, ಪ್ರಧಾನಿ ಮೇಲಾಗಲಿ ಇಲ್ಲ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಕೀರ್ತಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ನೀಡುವ 4 ಸಾವಿರ ಕಿಸಾನ್ ಸಮ್ಮಾನ್ ಯೋಜನೆ ನಿಲ್ಲಿಸಿದರು. ಹೈನುಗಾರಿಕೆಗೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಪ್ರೋತ್ಸಾಹ ನೀಡಿದ್ದರು. ಸಿದ್ದರಾಮಯ್ಯ 1 ಸಾವಿರ ಕೋಟಿ ರು.ಗೂ ಅಧಿಕ ಪ್ರೋತ್ಸಾಹಧನ ಉಳಿಸಿಕೊಂಡಿದ್ದಾರೆ. ಹಣವನ್ನೇ ಕ್ರೋಢೀಕರಿಸಲು ಸಾಧ್ಯವಾಗದೇ ದರ ಏರಿಕೆ ಮಾಡಿ, ಗ್ಯಾರಂಟಿಗಳನ್ನು ತಂದರು ಎಂದು ಕುಟುಕಿದರು.