ಮಿಡಲ್‌ ಪಕ್ಕ....ಕಾಯಂ ಶಿಕ್ಷಕರ ನೇಮಕಕ್ಕೆಆಗ್ರಹಿಸಿ ಅಹೋರಾತ್ರಿ ಧರಣಿ

KannadaprabhaNewsNetwork |  
Published : Aug 15, 2026, 02:30 AM IST
14ಕೆಪಿಆರ್‌ಸಿಆರ್‌ 05:  | Kannada Prabha

ಸಾರಾಂಶ

ಸರ್ಕಾರಿ ಶಾಲೆಗಳಿಗೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯಿಂದ ಶುಕ್ರವಾರ ರಾತ್ರಿ ಅಹೋರಾತ್ರಿ ಧರಣಿ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ಸರ್ಕಾರಿ ಶಾಲೆಗಳಿಗೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯಿಂದ ಶುಕ್ರವಾರ ರಾತ್ರಿ ಅಹೋರಾತ್ರಿ ಧರಣಿ ನಡೆಸಲಾಯಿತು.

ಸ್ಥಳೀಯ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿ ಮುಂದೆ ಸೇರಿದ ವೇದಿಕೆಯ ಪದಾಧಿಕಾರಿಗಳು,ಸದಸ್ಯರು, ಮಹಿಳೆಯರು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಘೋಷಣೆ ಕೂಗಿದರು.

ಸ್ವಾತಂತ್ರ್ಯ ಭಾರತ ದೇಶದಲ್ಲಿ ಶಿಕ್ಷಣಕ್ಕೆ ತನ್ನದೇ ಆದ ಪ್ರಾಮುಖ್ಯತೆಯಿದ್ದರೂ ಆಡಳಿತ ನಡೆಸುತ್ತಿರುವ ಸರ್ಕಾರಗಳು ಬಡ ಮಕ್ಕಳ ಶಿಕ್ಷಣ, ಸರ್ಕಾರಿ ಶಾಲೆಗಳ ಸಂರಕ್ಷಣೆ ವಿಚಾರದಲ್ಲಿ ಕಾಳಜಿ ವಹಿಸದೇ ಸರ್ಕಾರಿ ಶಾಲಾ ಕ್ಷೇತ್ರವನ್ನು ಕೊಲೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಖಾಲಿ ಇರುವ ,62 ಸಾವಿರ ಶಿಕ್ಷಕರನ್ನು ತಕ್ಷಣ ತುಂಬಬೇಕು. ಆರ್‌ಟಿಇ ಸಮರ್ಪಕ ಜಾರಿಯಾಗಬೇಕು. ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯ ನೀಡಬೇಕು .ತರಗತಿ ವಾರ ವಿಷಯವಾರು ಶಿಕ್ಷಕರನ್ನು ತುಂಬಬೇಕು ಎಂದು ಒತ್ತಾಯಿಸಿದರು.

ಈ ಅಹೋರಾತ್ರಿ ಧರಣಿಯಲ್ಲಿ ವೇದಿಕೆಯ ಮುಖ್ಯಸ್ಥರಾದ ವಿದ್ಯಾ ಪಾಟೀಲ್, ಮರಿಯಮ್ಮ, ಸಾವಿತ್ರಮ್ಮ, ಶಿವಮ್ಮ, ರಾಧಾ,ಅಕ್ಕಮ್ಮ,ಗೋವಿಂದ, ಪ್ರಸಾದ್, ಗುರುರಾಜ್, ಗೋವಿಂದ. ಬಸವರಾಜ್. ಆಂಜನೇಯ. ಹಫೀಜುಲಾ. ಎಂ ಆರ್ ಭೇರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

-----------------

14ಕೆಪಿಆರ್‌ಸಿಆರ್‌ 05: ರಾಯಚೂರಿನ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿ ಮುಂದೆ ಸೇರಿದ ವೇದಿಕೆಯಿಂದ ಅಹೋರಾತ್ರಿ ಧರಣಿ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೀಲ್ಸ್ ಕಾಲದಲ್ಲೂ ಚಿತ್ರಮಂದಿರ ನಿರ್ಮಾಣ ಧೈರ್ಯದ ಕೆಲಸ
ಆಟೋ ನಿಲ್ದಾಣ ನಿರ್ಮಾಣ ಸಾಮಗ್ರಿಗಳ ತೆರವು: ಆಟೋ ಚಾಲಕರ ಸಂಘ ಆಕ್ರೋಶ