ಚಿಕ್ಕಮಗಳೂರುಕಾಡಾನೆಗಳ ನಿರಂತರ ದಾಳಿ, ಬೆಳೆ ನಾಶ ಹಾಗೂ ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಬೇಸತ್ತ ಮಲೆನಾಡಿನ ರೈತರು ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಸರ್ಕಲ್ನಲ್ಲಿ ಶನಿವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ಬೇಲೂರು–ಮೂಡಿಗೆರೆ ರಸ್ತೆ ತಡೆದು ರೈತರ ಆಕ್ರೋಶ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕಾಡಾನೆಗಳ ನಿರಂತರ ದಾಳಿ, ಬೆಳೆ ನಾಶ ಹಾಗೂ ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಬೇಸತ್ತ ಮಲೆನಾಡಿನ ರೈತರು ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಸರ್ಕಲ್ನಲ್ಲಿ ಶನಿವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.ಮಾಕೋನಹಳ್ಳಿ ಮತ್ತು ನಂದಿಪುರ ಗ್ರಾಪಂ ವ್ಯಾಪ್ತಿಯ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೇಲೂರು–ಮೂಡಿಗೆರೆ ರಸ್ತೆಯಲ್ಲಿ ಕುಳಿತು ವಾಹನ ಸಂಚಾರ ತಡೆದು ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಕಾಡಾನೆಗಳ ದಾಳಿಗೆ ನಾಶವಾದ ಕಾಫಿ, ಅಡಕೆ ಗಿಡಗಳನ್ನು ಕಿತ್ತು ತಂದು ರಸ್ತೆಗೆ ಅಡ್ಡಲಾಗಿ ಹಾಕಿದ ರೈತರು, ಬೆಳೆ ನಷ್ಟಕ್ಕೆ ಸಮರ್ಪಕ ಪರಿಹಾರ ನೀಡಬೇಕು, ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಸಲು ಒತ್ತಾಯಿಸಿದರು.ಆನೆಗಳ ಸಮಸ್ಯೆಗೆ ಶಾಶ್ವತ ಪರಿಹಾರದ ಬದಲಿಗೆ ಅವುಗಳ ಸ್ಥಳಾಂತರ ಪ್ರಯತ್ನಕ್ಕೆ ಮುಂದಾದ ಸರ್ಕಾರದ ಕ್ರಮದ ಬಗ್ಗೆ ಯೂ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಕಾಡಾನೆಗಳ ನಿರಂತರ ಉಪಟಳದಿಂದ ಕೃಷಿಯನ್ನೇ ನಂಬಿದ ಕುಟುಂಬ ಗಳು ಸಂಕಷ್ಟಕ್ಕೆ ಸಿಲುಕಿವೆ. ಬೆಳೆಗಾರರ ಬದುಕು ಅತಂತ್ರವಾಗಿದೆ ಎಂದು ಆಕ್ರೋಶ ಹೊರಹಾಕಿದರು.ಆನೆ ಪೀಡಿತ ಪ್ರದೇಶಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುವವರೆಗೂ ಹೋರಾಟ ಮುಂದುವರಿಸುವ ನಿರ್ಧಾರ ಕೈಗೊಂಡ ರೈತರು, ಅಹೋರಾತ್ರಿ ಧರಣಿಗೆ ಕರೆ ನೀಡಿದ್ದಾರೆ.ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಗೆ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ.... ಬಾಕ್ಸ್....ಪರಿಹಾರಕ್ಕಾಗಿ ಗಡುವು: ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಮುಂದಾದ ರೈತಕಾಡಾನೆ ದಾಳಿಯಿಂದ ಬೆಳೆ ಕಳೆದುಕೊಂಡು ಪರಿಹಾರಕ್ಕೆ ಹೋರಾಟ ನಡೆಸುತ್ತಿದ್ದ ರೈತರೊಬ್ಬರು ಪ್ರತಿಭಟನಾ ಸ್ಥಳದಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ಮೂಡಿಗೆರೆ ನಡೆದಿದೆ.ತಾಲೂಕಿನ ಕಾರ್ ಬೈಲ್ ಗ್ರಾಮದ ರೈತ ಪ್ರಹ್ಲಾದ್ ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳದಲ್ಲಿದ್ದ ರೈತರು ಹಾಗೂ ಪೊಲೀಸರು ತಕ್ಷಣ ಬಾಟಲಿ ಕಿತ್ತುಕೊಂಡು ಅನಾಹುತ ತಪ್ಪಿಸಿದ್ದಾರೆ.ಕಾಡಾನೆ ದಾಳಿಯಿಂದ ತೋಟದಲ್ಲಿನ ಬೆಳೆ ನಾಶವಾಗಿದೆ. ಪರಿಹಾರಕ್ಕೆ ಹಲವು ದಿನಗಳಿಂದ ಮನವಿ ಸಲ್ಲಿಸಿದರೂ ಅಧಿಕಾರಿ ಗಳು ಸ್ಪಂದಿಸಿಲ್ಲ ಎಂಬುದು ರೈತನ ಅಳಲಾಗಿದೆ. ಬೆಳೆ ನಷ್ಟದ ಪರಿಹಾರದ ಚೆಕ್ ಅನ್ನು ಶನಿವಾರ ಸಂಜೆಯೊಳಗೆ ನೀಡಬೇಕು. ಇಲ್ಲದಿದ್ದರೆ ಭಾನುವಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಹ್ಲಾದ್ ಎಚ್ಚರಿಕೆ ನೀಡಿದ್ದಾರೆ. ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸಬೇಕು ಎಂಬ ಒತ್ತಾಯ ಮತ್ತಷ್ಟು ತೀವ್ರಗೊಂಡಿದೆ.... ಬಾಕ್ಸ್.....
ಧರಣಿ ಸ್ಥಳಕ್ಕೆ ಗಾಯತ್ರಿ ಶಾಂತೇಗೌಡ ಭೇಟಿಕಾಡಾನೆ ಹಾವಳಿ ಖಂಡಿಸಿ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಸರ್ಕಲ್ನಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಶನಿವಾರ ಭೇಟಿ ನೀಡಿದರು.ಕಾಡಾನೆಗಳ ನಿರಂತರ ದಾಳಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರು, ತಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ತಮ್ಮ ಅಳಲು ತೋಡಿಕೊಂಡರು.ಕಾಡಾನೆಗಳ ಹಾವಳಿಯಿಂದ ಕೃಷಿ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಬೆಳೆ ನಷ್ಟಕ್ಕೆ ಪರಿಹಾರ ನೀಡುವಲ್ಲೂ ವಿಳಂಬವಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ರೈತ ಪ್ರಹ್ಲಾದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು......ಬಾಕ್ಸ್......ಡಿಎಫ್ಒ ಭೇಟಿ ನೀಡುತ್ತಿದ್ದಂತೆ ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶಮಾಕೋನಹಳ್ಳಿ ಸರ್ಕಲ್ನಲ್ಲಿ ರೈತರ ಅಹೋರಾತ್ರಿ ಧರಣಿ ಸ್ಥಳಕ್ಕೆ ಅರಣ್ಯ ಇಲಾಖೆ ಚಿಕ್ಕಮಗಳೂರು ವಿಭಾಗದ ಡಿಎಫ್ಒ ಬೋರಯ್ಯ ಭೇಟಿ ನೀಡಿದರು.ಡಿಎಫ್ಒ ಧರಣಿ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಆಕ್ರೋಶಗೊಂಡ ರೈತರು ಅರಣ್ಯ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ತೀವ್ರಗೊಳಿಸಿದರು.ಕಾಡಾನೆಗಳ ನಿರಂತರ ದಾಳಿಯಿಂದ ಕಾಫಿ, ಅಡಕೆ ಸೇರಿದಂತೆ ವಿವಿಧ ಬೆಳೆಗಳು ನಾಶವಾಗುತ್ತಿದ್ದರೂ ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ಹಲವು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.ಕೇವಲ ತಾತ್ಕಾಲಿಕ ಕ್ರಮಗಳಿಂದ ಸಮಸ್ಯೆ ಬಗೆಹರಿಯಲ್ಲ. ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಜತೆಗೆ ಬೆಳೆ ನಷ್ಟ ಅನುಭವಿಸಿದ ರೈತರಿಗೆ ತಕ್ಷಣ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು.ಅರಣ್ಯ ಇಲಾಖೆ ಅಧಿಕಾರಿಗಳ ಮುಂದೆಯೇ ರೈತರು ತಮ್ಮ ಆಕ್ರೋಶ, ಧರಣಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.