ಭೋವಿ ಜಾತಿ ಪ್ರಮಾಣಪತ್ರಕ್ಕಾಗಿ ಅಹೋರಾತ್ರಿ ಧರಣಿ

KannadaprabhaNewsNetwork |  
Published : Oct 06, 2026, 02:15 AM IST
ಪೋಟೊ5ಕೆಎಸಟಿ5ಕುಷ್ಟಗಿ ಪಟ್ಟಣದ ತಹಸೀಲ್ದಾರ ಕಾರ್ಯಾಲಯ ಆವರಣದಲ್ಲಿ ಹಾಬಲಕಟ್ಟಿ ಗ್ರಾಮಸ್ಥರು ಧರಣಿ ನಡೆಸುತ್ತಿರುವದು.ತಹಸೀಲ್ದಾರ ಅಶೋಕ ಶೀಗ್ಗಾಂವಿ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಭೋವಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ತಾಲೂಕಿನ ಹಾಬಲಕಟ್ಟಿ ಗ್ರಾಮದ ಭೋವಿ ಸಮುದಾಯದ ಜನರು ಸೋಮವಾರ ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಿದರು.

ಕುಷ್ಟಗಿ: ಭೋವಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ತಾಲೂಕಿನ ಹಾಬಲಕಟ್ಟಿ ಗ್ರಾಮದ ಭೋವಿ ಸಮುದಾಯದ ಜನರು ಸೋಮವಾರ ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಿದರು.

ಹಾಬಲಕಟ್ಟಿ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಮೂಲ ಭೋವಿ ಜನಾಂಗದ 40ರಿಂದ 50 ಕುಟುಂಬಗಳು ವಾಸಿಸುತ್ತಿದ್ದು, ಹಲವು ಕುಟುಂಬಗಳ ಶಾಲಾ ದಾಖಲೆಗಳಲ್ಲಿ ‘ಹಿಂದೂ ಭೋವಿ’ ಎಂದು ನಮೂದಾಗಿದೆ. 1986ರಿಂದ 2014ರ ವರೆಗೆ ಭೋವಿ ಪರಿಶಿಷ್ಟ ಜಾತಿ ಪ್ರಮಾಣಪತ್ರಗಳನ್ನು ನೀಡಲಾಗಿದೆ. ಆದರೆ ಪ್ರಸ್ತುತ ಪ್ರಮಾಣಪತ್ರ ನೀಡುತ್ತಿಲ್ಲ ಎಂದು ಧರಣಿನಿರತರು ಆರೋಪಿಸಿದರು.

ವಿ.ಎಸ್. ಉಗ್ರಪ್ಪ ನೇತೃತ್ವದ ವಿಶೇಷ ಸದನ ಸಮಿತಿಯ ಶಿಫಾರಸು ವರದಿ ಹಾಗೂ ಸರ್ಕಾರದ ಸುತ್ತೋಲೆಗಳಂತೆ ಅರ್ಹರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಬೇಕು. 2016ರಲ್ಲಿ ಅಂದಿನ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಾತಿ ಪ್ರಮಾಣಪತ್ರ ನೀಡುವಂತೆ ಶಿಫಾರಸು ಮಾಡಿದ್ದರು ಎಂದು ಪ್ರತಿಭಟನಾಕಾರರು ತಿಳಿಸಿದರು.

ಪ್ರಮಾಣಪತ್ರ ದೊರೆಯದ ಕಾರಣ ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ. ಸಮಸ್ಯೆ ಬಗೆಹರಿಸುವ ವರೆಗೆ ಧರಣಿ ಮುಂದುವರಿಸುವುದಾಗಿ ಅವರು ಹೇಳಿದರು.

ಧರಣಿ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಮೂಲ ಜಾತಿ ಬೋಯಿ ಎಂದು ದಾಖಲಾಗಿದ್ದು, ಈ ಜಾತಿಗೆ ಪ್ರವರ್ಗ-1 ಪ್ರಮಾಣಪತ್ರ ನೀಡಲು ಅವಕಾಶವಿದೆ. ಆದರೆ ಭೋವಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ಅವಕಾಶವಿಲ್ಲ ಎಂದು ತಿಳಿಸಿದ ಅವರು ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಪಿಎಸ್‌ಐ ಹನುಮಂತಪ್ಪ ತಳವಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತುಗ್ಲೆಪ್ಪ ದೇಸಾಯಿ ಮನವೊಲಿಸಿದರು ಪ್ರತಿಭಟನಾಕಾರರು ಪ್ರತಿಭಟನೆಯನ್ನು ಮುಂದುವರಿಸಿದರು. ಧರಣಿಯಲ್ಲಿ ಶರಣಪ್ಪ ಬೋವಿ, ಹನುಮಪ್ಪ ಬೋವಿ, ಶೇಖಪ್ಪ, ಮುತ್ತಪ್ಪ, ಸಾವಿತ್ರಮ್ಮ, ರೇಣಮ್ಮ, ಯಲ್ಲಮ್ಮ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಕರೆಗೆ ₹50 ಸಾವಿರ ಪರಿಹಾರ ಕೊಡಿ
ಗ್ರಾಮೀಣ ಪ್ರಥಮ ಚಿಕಿತ್ಸಕರ ಸೇವೆ ಶ್ಲಾಘನೀಯ