ನಾಳೆ ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಹೋರಾಟ

KannadaprabhaNewsNetwork |  
Published : Oct 04, 2026, 01:30 AM IST
2ಕೆಪಿಎಲ್ಎನ್ ಜಿ02 :  | Kannada Prabha

ಸಾರಾಂಶ

ಸಿಂಧನೂರು ತಾಲೂಕಿನಲ್ಲಿ ಹೆಚ್ಚುವರಿ ಭೂಮಿ ಉಳಿಸಿಕೊಡುವಲ್ಲಿ ಕಂದಾಯ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ನಾಡಗೌಡರ ಬಾಗಿಲು ಕಾಯುವ ಕಾವಲುಗಾರರಂತೆ ವರ್ತಿಸುತ್ತಿದ್ದಾರೆ ಎಂದು ಕರ್ನಾಟಕ ರೈತ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಿ.ಹೆಚ್.ಪೂಜಾರ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಲಿಂಗಸುಗೂರು

ಸಿಂಧನೂರು ತಾಲೂಕಿನಲ್ಲಿ ಹೆಚ್ಚುವರಿ ಭೂಮಿ ಉಳಿಸಿಕೊಡುವಲ್ಲಿ ಕಂದಾಯ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ನಾಡಗೌಡರ ಬಾಗಿಲು ಕಾಯುವ ಕಾವಲುಗಾರರಂತೆ ವರ್ತಿಸುತ್ತಿದ್ದಾರೆ ಎಂದು ಕರ್ನಾಟಕ ರೈತ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಿ.ಹೆಚ್.ಪೂಜಾರ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಭೂಮಿಗೆ ಮಂಜೂರಾತಿ ದೊರೆಯದಂತೆ ಅನಗತ್ಯ ನಿಯಮಗಳನ್ನು ರೂಪಿಸುವ ಮೂಲಕ ಅಕ್ರಮ-ಸಕ್ರಮ ಕಾಯ್ದೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡಲಾಗಿದೆ ಎಂದು ದೂರಿದರು.

ರಾಜ್ಯದಲ್ಲಿ ಬರ ಘೋಷಣೆಗೆ ಅನುಸರಿಸುತ್ತಿರುವ ಮಾನದಂಡಗಳು ಅವೈಜ್ಞಾನಿಕವಾಗಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಉದ್ದೇಶದಿಂದ ಇಂತಹ ಮಾನದಂಡಗಳನ್ನು ರೂಪಿಸಿವೆ ಎಂದು ಆರೋಪಿಸಿದರು.

ಬರಪೀಡಿತ ಪ್ರದೇಶಗಳ ರೈತರಿಗೆ ಎಕರೆಗೆ 30 ಸಾವಿರದಿಂದ 50 ಸಾವಿರದವರೆಗೆ ಪರಿಹಾರಧನ ನೀಡಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ವರ್ಷಪೂರ್ತಿ ಉಚಿತ ಆಹಾರ ಧಾನ್ಯ ವಿತರಿಸಬೇಕು ಸೇರಿದಂತೆ ರೈತರ ಪರವಾದ ಒಟ್ಟು 24 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ರೈತರ ಸಮಸ್ಯೆಗಳು ಹಾಗೂ ಸರ್ಕಾರದ ನೀತಿಗಳನ್ನು ಖಂಡಿಸಿ ಅ.5ರಂದು ರಾಯಚೂರಿನಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ. ಧರಣಿಗೆ ಸರ್ಕಾರ ಸ್ಪಂದಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ಹಂತದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಛೇಂಬರ್‌ನಲ್ಲಿಯೇ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು. ಮುಖಂಡರಾದ ಶೇಖರಯ್ಯ ಗೆಜ್ಜಲಗಟ್ಟಾ, ಅಶೋಕ ನಿಲೋಗಲ್, ಚಿಟ್ಟಿಬಾಬು, ರಮೇಶ ಪಾಟೀಲ್, ಗೌಸ್ ಸಾಬ್, ಹುಲಗಪ್ಪ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚುನಾವಣಾ ಆಯೋಗದಿಂದ ಮತ ಕಳ್ಳತನ: ಸಚಿವ ಪುಟ್ಟರಂಗಶೆಟ್ಟಿ
ಸಂಗೀತ, ನೃತ್ಯದಿಂದ ಒತ್ತಡ ಕಡಿಮೆ: ದಿನೇಶ್ ಗೂಳಿಗೌಡ