ಪರ್ಯಾಯ ಬೆಳೆ ಪದ್ಧತಿ-ಸಾವಯವ ಗೊಬ್ಬರಗಳ ಬಳಕೆ
ರಾಗಿ, ಮುಸುಕಿನ ಜೋಳ, ತೊಗರಿ, ಸೂರ್ಯಕಾಂತಿ, ನೆಲಗಡಲೆ, ಹುರುಳಿಯನ್ನು ಬೆಳೆಯುವಂತೆ ರೈತರಿಗೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮನವಿ ಮಾಡಿದ್ದಾರೆ.
ಪರ್ಯಾಯ ಬೆಳೆ ಪದ್ಧತಿ ಮತ್ತು ಸಾವಯವ ಗೊಬ್ಬರಗಳ ಬಳಕೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.ರೈತರು ಖಾಸಗಿ ಮಳಿಗೆಗಳಿಂದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸುವಾಗ ಕಡ್ಡಾಯವಾಗಿ ರಶೀದಿಗಳನ್ನು ಕೇಳಿ ಪಡೆಯುವಂತೆ ತಿಳಿಸಿದರು. ಕೃಷಿ ಇಲಾಖೆ ಮತ್ತು ಕೃಷಿ ವಿಜ್ಞಾನಿಗಳು ಗ್ರಾಮೀಣ ಭಾಗದಲ್ಲಿ ಹೆಚ್ಚು ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು.
ರೈತರು ಸಾರಜನಕ ಹಾಗೂ ರಂಜಕದ ಪೋಷಕಾಂಶಗಳಿಗಾಗಿ ಕೇವಲ ಯೂರಿಯಾ ಮತ್ತು ಡಿಎಪಿ ಗೊಬ್ಬರಗಳ ಮೇಲೆ ಅವಲಂಬಿತರಾಗದೆ, ಹಸಿರೆಲೆ ಗೊಬ್ಬರ, ಕೊಟ್ಟಿಗೆ ಗೊಬ್ಬರ, ಎರೆಹುಳ ಗೊಬ್ಬರ, ಜೀವಾಮೃತ, ಬೀಜಾಮೃತ, ಜೈವಿಕ ಗೊಬ್ಬರ, ಕಾಂಪೋಸ್ಟ್ ಗೊಬ್ಬರ ಮುಂತಾದ ಸಾವಯವ ಗೊಬ್ಬರಗಳನ್ನು ಬಳಸುವಂತೆ ಸಲಹೆ ನೀಡಿದರು.