ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಸಿಇಒ ಭೇಟಿ, ಪರಿಶೀಲನೆ

KannadaprabhaNewsNetwork |  
Published : Apr 24, 2026, 03:15 AM IST
ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಸಿಇಓ ಭೇಟಿ ಪರಿಶೀಲನೆ | Kannada Prabha

ಸಾರಾಂಶ

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಮತ್ತು ಜಮಖಂಡಿ ನಗರಗಳಲ್ಲಿ ಗುರುವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿ.ಪಂ ಸಿಇಓ ಶಶಿಧರ ಕುರೇರ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆಗಳ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯ ಬಾಗಲಕೋಟೆ ಮತ್ತು ಜಮಖಂಡಿ ನಗರಗಳಲ್ಲಿ ಗುರುವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿ.ಪಂ ಸಿಇಓ ಶಶಿಧರ ಕುರೇರ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆಗಳ ಪರಿಶೀಲಿಸಿದರು.

ಜಿಲ್ಲಾಧಿಕಾರಿ ಸಂಗಪ್ಪ ಅವರು ನಗರದ ಎಸ್.ಬಿ. ಪಾಟೀಲ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಸ್ಥಾಪಿಸಲಾದ ಕೇಂದ್ರಕ್ಕೆ ಭೇಟಿ ನೀಡಿದರೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆ, ವಿದ್ಯಾಗಿರಿಯಲ್ಲಿರುವ ತುಂಗಳ ಸೈನ್ಸ್ ಕಾಲೇಜು, ಬಾಗಲಕೋಟೆ ನಗರದ ಬಸವೇಶ್ವರ ಆಟ್ಸ್ ಕಾಲೇಜು ಹಾಗೂ ಸರಕಾರಿ ಹೆಣ್ಣು ಮಕ್ಕಳ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರೀಕ್ಷಾರ್ಥಿಗಳಿಗೆ ಕಲ್ಪಿಸಲಾದ ಮೂಲ ಸೌಲಭ್ಯಗಳು, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಿದ್ಯುತ್ ಪೂರೈಕೆ ಸೇರಿದಂತೆ ಕೇಂದ್ರಗಳಲ್ಲಿ ಕೈಗೊಳ್ಳಲಾದ ಸಿದ್ದತೆಗಳನ್ನು ಪರಿಶೀಲಿಸಿದರು. ಪರೀಕ್ಷೆಗಳು ಯಾವುದೇ ಅಡಚಣೆ ಇಲ್ಲದೇ ಸುಗಮವಾಗಿ ನಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಕೇಂದ್ರದ ಸುತ್ತಮುತ್ತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿರುವ ಬಗ್ಗೆ ಮಾಹಿತಿ ಪಡೆದು, ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿ.ಪಂ ಸಿಇಓ ಅವರ ಭೇಟಿ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ಧೆಶಕ ಪುಂಡಲೀಕ ಕಾಂಬಳೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಲ್‌ ತುಂಬದ್ದಕ್ಕೆ ಶಾಸಕರ ಕಚೇರಿಗೆ ವಿದ್ಯುತ್ ಕಟ್
ವಿಪಕ್ಷಗಳಿಂದ ಭಾರತ ಮಾತೆಯ ಭ್ರೂಣ ಹತ್ಯೆ