ಮದ್ದೂರು
ಜಿಲ್ಲಾಧಿಕಾರಿ ಡಾ.ಕುಮಾರ ಗುರುವಾರ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಹಾಜರಿದ್ದ ಸಾರ್ವಜನಿಕರು ಆರ್.ಟಿ.ಸಿ ತಿದ್ದುಪಡಿ, ಪೋಡಿ ತಿದ್ದುಪಡಿ, ಜನನ- ಮರಣ ಪ್ರಮಾಣ ಪತ್ರ ಕುರಿತು ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಖುದ್ದು ಸ್ವೀಕರಿಸಿ ಕುಂದುಕೊರತೆ ಆಲಿಸಿದರು.
ಜಿಲ್ಲಾಧಿಕಾರಿಗಳು ಅರ್ಜಿಗಳನ್ನು ತಹಸೀಲ್ದಾರ್, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೀಡಿ ನಿಯಮಾನುಸಾರ ಅರ್ಜಿಗಳು ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಸರ್ಕಾರಿ ಕೆಲಸಗಳಿಗೆ ಕಚೇರಿಗೆ ವಿನಃ ಕಾರಣ ಅಲೆದಾಡಿಸಬಾರದು. ಈ ಬಗ್ಗೆ ದೂರು ಕಂಡುಬಂದಲ್ಲಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.ನಂತರ ವಿವಿಧ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸಭೆ ನಡೆಸಿ ಕಡತಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಿದರು. ನಿಗದಿಪಡಿಸಿರುವ ಸಮಯಕ್ಕೆ ಎಲ್ಲಾ ಅರ್ಜಿಗಳು ವಿಲೇವಾರಿ ಮಾಡಬೇಕು ಎಂದರು.
ಆರ್.ಟಿ.ಸಿ ವಿತರಣ ಕೇಂದ್ರ ಸೇರಿದಂತೆ ವಿವಿಧ ಸರ್ವೇ ಶಾಖೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳಿಗೆ ನಿಯಮಿತ ಕಾಲಾವಧಿಯಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.ಜನನ ಮರಣ ಶಾಖೆಯಲ್ಲಿ ನಿಯಮಿತ ಕಾಲಮಿತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ಗ್ರೇಡ್-2 ತಹಸೀಲ್ದಾರ್‌ಗೆ,
- ರೆಕಾರ್ಡ್ ರೂಂನಲ್ಲಿ ತುರ್ತಾಗಿ ನಕಲು ಒದಗಿಸಲು ಸೂಚಿಸಿದರು. ತಾಲೂಕು ಕಚೇರಿ ಕಟ್ಟಡದ ದುರಸ್ತಿ ಕೆಲಸದ ಬಗ್ಗೆ ಪರಿಶೀಲನೆ ನಡೆಸಿದರು.ಸಮಾಜ ಸೇವೆ ಹಾಗೂ ಗಣನೀಯ ಸೇವೆ ಸಲ್ಲಿಸಿದವರಿಂದ ಅರ್ಜಿ ಆಹ್ವಾನ
ಮಂಡ್ಯ: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೋಬರ್ 1ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವವರನ್ನು ಸನ್ಮಾನಿಸಲು ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಹಾಗೂ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರೀಕರಿಗೆ 6 ವೈಯುಕ್ತಿಕ ಹಾಗೂ 1 ಸಂಸ್ಥೆ ಸೇರಿ ಒಟ್ಟು 7 ಪ್ರಶಸ್ತಿಗಳನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಜಿಗಳನ್ನು ಡಿ.ಸಿ.ಆಫೀಸ್ ಹತ್ತಿರದ ಹಳೆ ತಾಲೂಕು ಕಛೇರಿ ಆವರಣದಲ್ಲಿನ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಪಡೆದು ಕನ್ನಡದಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಆಗಸ್ಟ್ 20 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ: 08232-231090/ 239234 ಅನ್ನು ಸಂಪರ್ಕಿಸಬಹುದು ಎಂದು ಇವರಿಂದ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.