ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಭಾರತ ಜನಗಣತಿ 2027ರ ನಿಮಿತ್ತ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು, ಇತರೆ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಜನಗಣತಿ ಸಮರ್ಪಕವಾಗಿ ನಡೆಸಲು ಜಿಲ್ಲಾಡಳಿತ ಮುಂಚೆಯೇ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಮೂರು ದಿನಗಳ ಈ ತರಬೇತಿ ಶಿಬಿರ ಆಯೋಜಿಸಿದೆ. ಹಾಗಾಗಿ ಈ ಕಾರ್ಯದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.ಇದು ಸಂಪೂರ್ಣ ಡಿಜಿಟಲ್ ರೂಪದಲ್ಲಿ ನಡೆಯಲಿದೆ. ಈ ಪ್ರಕ್ರಿಯೆಗೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ವಹಿಸಿ ತರಬೇತಿ ಸದುಪಯೋಗಪಡಿಸಿಕೊಳ್ಳಬೇಕು. 2026ರ ಏ.16ರಿಂದ ಮೇ 16ರವರೆಗೆ ಭಾರತದ ಜನಗಣತಿ-2027ರ ನಿಮಿತ್ತ ಮನೆಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ. ಜನಗಣತಿ ಸಲುವಾಗಿ ಬ್ಲಾಕ್ ರಚಿಸಲಾಗುತ್ತಿದ್ದು,150 ರಿಂದ 200 ಮನೆಗಳು ಅಥವಾ 700 ರಿಂದ 800 ಜನಸಂಖ್ಯೆಗೆ ಓರ್ವ ಗಣತಿದಾರರನ್ನು ಮತ್ತು ಪ್ರತಿ ಆರು ಜನ ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲಾಗುವುದು ಹೇಳಿದರು.
ಎರಡನೇ ಹಂತವಾಗಿ ಫೆಬ್ರವರಿ 2027ರಲ್ಲಿ ಜನಸಂಖ್ಯಾ ಗಣತಿ ಕಾರ್ಯ ನಡೆಯಲಿದೆ. ಈ ಗಣತಿ ಕಾರ್ಯ ಡಿಜಿಟಲ್ ಆಗಿದ್ದು, ಮೊಬೈಲ್ ಆಪ್ ನಲ್ಲಿ ನಿಗದಿಪಡಿಸಿದ ಪ್ರಶ್ನಾವಳಿ ಮೂಲಕ ದತ್ತಾಂಶ ಸಂಗ್ರಹಿಸುವುದು ಈ ಜನಗಣತಿ ವಿಶೇಷವಾಗಿದೆ. ಡಿಜಿಟಲ್ ಮೋಡ್ ನಡೆಯುವ ಪ್ರಥಮ ಜನಗಣತಿಯಾಗಿದೆ. ಮೋಡ್ ನಡೆಯುವ ಪ್ರಥಮ ಜನಗಣತಿಯಾಗಿದೆ. ಗಣತಿದಾರರ ಸ್ಮಾರ್ಟ ಫೋನ್ ಮೀಸಲಾದ ಮೊಬೈಲ್ ಆಪ್ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.ಆರಂಭದಿಂದ ಮುಕ್ತಾಯದವರೆಗೆ ಜನಗಣತಿ ಮೇಲ್ವಿಚಾರಣಾ ಮತ್ತು ನಿರ್ವಹಣೆ ವ್ಯವಸ್ಥೆ ಸಿಎಂಎಂಎಸ್ ಪೋರ್ಟಲ್ ಮೂಲಕ ನಿರ್ವಹಿಸಲಾಗುತ್ತಿದೆ. ಹಾಗಾಗಿ ಇಲ್ಲಿ ನಡೆಯುವ ತರಬೇತಿಯ ಸಂಪೂರ್ಣ ಮಾಹಿತಿ ಪಡೆದುಕೊಂಡು ಗೊಂದಲಗಳಿಗೆ ಅವಕಾಶ ನೀಡದಂತೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗಣತಿದಾರರು ತಮಗೆ ವಹಿಸಿದ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳು ಗಣತಿದಾರರಿಗೆ ತರಬೇತಿ ನೀಡಬೇಕು. ಈ ಜನಗಣತಿಯಿಂದ ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ದಿಕ್ಕೂಚಿಯಾಗಲಿದ್ದು, ಯಾವುದೇ ಲೋಪದೋಷಗಳಿಲ್ಲದೆ ಸಮೀಕ್ಷೆ ನಡೆಸಬೇಕು. ಮನೆ ಪಟ್ಟಿ ಮಾಡುವಾಗ ಸರಿಯಾಗಿ ನಿರ್ವಹಿಸಬೇಕು. ಇದೊಂದು ಮಹತ್ವದ ಜವಾಬ್ದಾರಿಯಾಗಿದೆ. ಮೊದಲ ಹಂತದಲ್ಲಿ ಈ ಕಾರ್ಯವನ್ನು ಅತ್ಯಂತ ಸುಸೂತ್ರವಾಗಿ ನಿರ್ವಹಿಸಬೇಕು ಎಂದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಪಂ ಉಪ ಕಾರ್ಯದರ್ಶಿ ಅತೀಕ್ ಪಾಷಾ, ಉಪ ವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಎಲ್ಲಾ ತಹಸೀಲ್ದಾರರು, ನಗರಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.