ಟೆನ್ನಿಸ್ ಚಾಂಪಿಯನ್ ಶಿಪ್ ಯಶಸ್ವಿಗೆ ಡಿಸಿ ಸೂಚನೆ

KannadaprabhaNewsNetwork |  
Published : Apr 05, 2026, 01:15 AM IST
 | Kannada Prabha

ಸಾರಾಂಶ

ಮೇ 3ರಿಂದ 10 ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟ ತುಮಕೂರು ಓಪನ್ ಚಾಂಪಿಯನ್ ಶಿಪ್ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು

ಮೇ 3ರಿಂದ 10 ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟ ತುಮಕೂರು ಓಪನ್ ಚಾಂಪಿಯನ್ ಶಿಪ್ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಕ್ರೀಡಾಕೂಟ ಸಂಬಂಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ವಹಿಸಿರುವ ಜವಾಬ್ದಾರಿಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸುವಂತೆ ಅವರು ತಿಳಿಸಿದರು.

ವಿವಿಧ ಸುಮಾರು 12 ದೇಶಗಳಿಂದ ಕ್ರೀಡಾಪಟುಗಳು ತುಮಕೂರಿಗೆ ಬರಲಿದ್ದಾರೆ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದ ತೀರ್ಪುಗಾರರು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು ಅವರಿಗೆಲ್ಲಾ ವಸತಿ, ಊಟ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಬೇಕು ಎಂದರು. ಈ ಕ್ರೀಡಾಕೂಟವು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಯೋಗದಲ್ಲಿ ನಡೆಯುತ್ತಿದ್ದು ತುಮಕೂರಿನ ನಾಲ್ಕು ಕ್ರೀಡಾ ಅಂಕಣಗಳಲ್ಲಿ ನಡೆಯಲಿದೆ. ಈ ಕ್ರೀಡಾ ಕೂಟಕ್ಕೆ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಸುಮಾರು 100 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕಾರ‍್ಯಕ್ರಮದ ಸಂಪೂರ್ಣ ವೆಚ್ಚವನ್ನು ದಾನಿಗಳೆ ನೀಡಲಿದ್ದಾರೆ. ಟೆನ್ನಿಸ್ ಅಸೋಸಿಯೇಷನ್ ಖಾತೆಗೆ ನೇರವಾಗಿ ದಾನಿಗಳು ತಮ್ಮ ನೆರವನ್ನು ನೀಡಬಹುದು. ಸದ್ಯದಲ್ಲೇ ಅವರ ಖಾತೆ ಸಂಖ್ಯೆಯನ್ನು ಸಾರ್ವಜನಿಕರಿಗೆ ನೀಡಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎ.ಅಶೋಕ್ ಸೇರಿದಂತೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾದಾಪುರ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಮಹಾರಥೋತ್ಸವ
ಅರಸೀಕೆರೆಯಲ್ಲಿ ಯುವಕನ ಮೇಲೆ ಹಲ್ಲೆ ಆರೋಪ