ಕನ್ನಡಪ್ರಭ ವಾರ್ತೆ ವಿಜಯಪುರ
ವಿಮಾನ ನಿಲ್ದಾಣದ ರನ್‌ವೇ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದ್ದು, ಬಾಕಿ ಇರುವ ರನವೇ ಮಾರ್ಕಿಂಗ್ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದರು. ಟರ್ಮಿನಲ್ ಕಟ್ಟಡದಲ್ಲಿ ಅಳವಡಿಸಲಾದ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಟರ್ಮಿನಲ್ ಕಟ್ಟಡ ಬಣ್ಣ ಹಚ್ಚುವ ಕಾಮಗಾರಿ ವೀಕ್ಷಿಸಿದ ಅವರು, ರಾಷ್ಟ್ರೀಯ ಹೆದ್ದಾರಿಯಿಂದ ವಿಮಾನ ನಿಲ್ದಾಣಕ್ಕೆ ಕೂಡುವ ರಸ್ತೆ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ತಹಸೀಲ್ದಾರ್ ಕವಿತಾ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎ. ಪಾಟೀಲ, ಪ್ರಥಮ ದರ್ಜೆ ಗುತ್ತಿಗೆದಾರರಾದ ಎಸ್.ಎಸ್.ಆಲೂರ ಹಾಗೂ ಶರವಣನ್ ಉಪಸ್ಥಿತರಿದ್ದರು.