ಕನ್ನಡಪ್ರಭ ವಾರ್ತೆ ವಿಜಯಪುರ
ಸೈಕ್ಲಿಂಗ್ ವೆಲೊಡ್ರೊಮ್ ಕಾಮಗಾರಿಯನ್ನು ಸಂಪೂರ್ಣ ಪರಿಶೀಲಿಸಿದ ಅವರು, ಈ ತಿಂಗಳ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿ ಶೇ.೯೫ರಷ್ಟು ಮುಕ್ತಾಯಗೊಂಡಿದ್ದು, ಅಲ್ಲಲ್ಲಿ ಟ್ರ್ಯಾಕ್ ಸಮತಟ್ಟುಗೊಳಿಸುವ ಹಾಗೂ ಕೆಲವು ಕಡೆ ಬಾಕಿ ಇರುವ ಪೇಂಟಿಂಗ್ ಕಾರ್ಯ ನಡೆಯಬೇಕಿದೆ. ಅದನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಹಾಗೂ ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅರಣ್ಯ ಇಲಾಖೆಯ ಅಧೀನದಲ್ಲಿರುವ ಜಲಮೂಲಗಳಿಂದ ಸೈಕ್ಲಿಂಗ್ ವೆಲೋಡ್ರೊಮಗೆ ಪೈಪ್‌ಲೈನ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಬೇಕು. ವೆಲೋಡ್ರೊಮ್ ಆವರಣದಲ್ಲಿ ಸಸಿಗಳನ್ನು ನೆಡಲು ಅಗತ್ಯ ಕ್ರಮಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಒಂದು ವಾರದ ಕಾಲಾವಧಿಯಲ್ಲಿ ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು. ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಿ.ಎನ್.ಮಲಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ದೈವಾಡಿ ಸೇರಿದಂತೆ ಮುಂತಾದವರು ಇದ್ದರು.