ಮಾದಪ್ಪ ಬೆಟ್ಟದಲ್ಲಿ ಸಿದ್ಧತೆಗಳ ವೀಕ್ಷಿಸಿದ ಡಿಸಿ

KannadaprabhaNewsNetwork |  
Published : Nov 08, 2026, 01:30 AM IST
ಮಲೆ ಮಹದೇಶ್ವರ ಬೆಟ್ಟದಲ್ಲಿ  | Kannada Prabha

ಸಾರಾಂಶ

ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಜಾತ್ರಾ ಮಹೋತ್ಸವ ಹಿನ್ನೆಲೆ ಪ್ರಾಧಿಕಾರದ ವತಿಯಿಂದ ಮಾಡಲಾಗಿರುವ ಸಿದ್ಧತೆಗಳನ್ನು ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ದೇವಾಲಯದ ವಿವಿಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹನೂರು

ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಜಾತ್ರಾ ಮಹೋತ್ಸವ ಹಿನ್ನೆಲೆ ಪ್ರಾಧಿಕಾರದ ವತಿಯಿಂದ ಮಾಡಲಾಗಿರುವ ಸಿದ್ಧತೆಗಳನ್ನು ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ದೇವಾಲಯದ ವಿವಿಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ದೇವರ ದರ್ಶನ, ದಾಸೋಹ, ಕುಡಿಯುವ ನೀರು ಸೇರಿದಂತೆ ಭಕ್ತಾದಿಗಳಿಗೆ ಕಲ್ಪಿಸಲಾಗಿರುವ ಇತರೆ ಸೌಲಭ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೀಪಾವಳಿ ಹಬ್ಬಕ್ಕೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಸಮಸ್ಯೆಗಳಿಲ್ಲದೆ ಮುಕ್ತವಾಗಿ ಮಾದಪ್ಪನ ದರ್ಶನ, ದಾಸೋಹ, ಶುದ್ಧ ಕುಡಿಯುವ ನೀರು, ಇತರೆ ಮೂಲಸೌಕರ್ಯಗಳನ್ನು ಸೂಕ್ತ ರೀತಿಯಲ್ಲಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ದೀಪಾವಳಿ ಹಬ್ಬದ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ಮಾದಪ್ಪನ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ವಿವಿಧಡೆ ತೆರಳಿ ಪರಿಶೀಲನೆ ನಡೆಸಿ ನಂತರ ಮಾದಪ್ಪನ ದರ್ಶನ ಪಡೆದು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು ...

ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ, ಪುರುಷೋತ್ತಮ್, ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ