ಸುಗಮ ಮತ ಎಣಿಕೆಗೆ ಡಿಸಿ ಸೂಚನೆ

KannadaprabhaNewsNetwork | Published : Jun 2, 2024 1:46 AM

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯುವಂತೆ ಮಾಡಲು ಜಿಲ್ಲಾಡಳಿತ ನಿಯೋಜಿತ ಸಿಬ್ಬಂದಿಗೆ ತರಬೇತಿ ನೀಡಿ ಸಜ್ಜುಗೊಳಿಸಿದೆ. ಯಾವುದೇ ಲೋಪದೋಷಗಳು ನಡೆಯದಂತೆ ಸುಗಮ ಮತ ಎಣಿಕೆ ಕಾರ್ಯ ನಡೆಸುವಂತೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ನಿರ್ದೇಶನ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯುವಂತೆ ಮಾಡಲು ಜಿಲ್ಲಾಡಳಿತ ನಿಯೋಜಿತ ಸಿಬ್ಬಂದಿಗೆ ತರಬೇತಿ ನೀಡಿ ಸಜ್ಜುಗೊಳಿಸಿದೆ. ಯಾವುದೇ ಲೋಪದೋಷಗಳು ನಡೆಯದಂತೆ ಸುಗಮ ಮತ ಎಣಿಕೆ ಕಾರ್ಯ ನಡೆಸುವಂತೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ನಿರ್ದೇಶನ ನೀಡಿದರು.

ಜೂ.4 ರಂದು ನಗರದ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಈ ಸಂಬಂಧ ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿಗೆ ಶನಿವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ 2ನೇ ಹಂತದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ಅವರು ಮಾತನಾಡಿದರು. ಜೂನ್ 4 ರಂದು ನಡೆಯುವ ಮತ ಎಣಿಕೆ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಎಲ್ಲ ಸಿದ್ದತೆ ಕೈಗೊಳ್ಳಬೇಕು. ಯಾವುದೇ ಗೊಂದಲಕ್ಕೊಳಗಾಗದೇ ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಗುರುತಿನ ಚೀಟಿ ಕಡ್ಡಾಯ:

ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿದಲ್ಲಿ ತಕ್ಷಣ ಸಂಬಂಧಿಸಿದ ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಮತ ಎಣಿಕೆ ಕಾರ್ಯನಿರ್ವಹಿಸಲು ತಮಗೆ ತಿಳಿಯದ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ಪಡೆದುಕೊಳ್ಳಿ. ಮತ ಎಣಿಕೆ ಕಾರ್ಯ ಸುಗಮವಾಗಿ ಹಾಗೂ ಸುಸೂತ್ರವಾಗಿ ನಡೆಸಲು ಸನ್ನದ್ದವಾಗಿರಿ ಎಂದು ಸೂಚಿಸಿದರು. ಮತ ಎಣಿಕೆ ದಿನ ಮತ ಎಣಿಕೆ ಕೇಂದ್ರಕ್ಕೆ ಸಿಬ್ಬಂದಿ ಬೇಗನೆ ಆಗಮಿಸಬೇಕು, ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹಾಕಿಕೊಂಡು ಬರುವಂತೆ ತಿಳಿಸಿದರು.

ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಹಿಸಿದ ಜವಾಬ್ದಾರಿಗಳನ್ನು ಅರಿತುಕೊಳ್ಳಲು ಈ ತರಬೇತಿ ಮುಖ್ಯವಾಗಿದೆ. ಇಲ್ಲಿನ ವಿಷಯಗಳನ್ನು ಅರ್ಥ ಮಾಡಿಕೊಂಡು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಮೈಕ್ರೋ ಅಬ್ಸರ್ವರ್‌ ಅವರ ಜವಾಬ್ದಾರಿ ಬಹು ಮುಖ್ಯವಾಗಿದ್ದು, ಎಚ್ಚರಿಕೆಯಿಂದ ಇರುವಂತೆ ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಈಗಾಗಲೇ ಎರಡು ಹಂತದ ತರಬೇತಿ ನೀಡಲಾಗಿದೆ. ವಿಷಯ ಮನದಟ್ಟು ಮಾಡಿಕೊಂಡು ಶಿಸ್ತುಬದ್ದವಾಗಿ ಸಂಯಮದಿಂದ ಕಾರ್ಯನಿರ್ವಹಿಸಲು ತಿಳಿಸಿದರು. ತರಬೇತುದಾರ ಬಿ.ಕೆ.ತೋಟದ ಸಿಬ್ಬಂದಿಗೆ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಯುಕೆಪಿ ಮಹಾ ವ್ಯವಸ್ಥಾಪಕ ರಮೇಶ ಕಳಸದ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಸಹಾಯಕ ಚುನಾವಣಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ಸಾಜಿದ ಅಹಮ್ಮದ ಮುಲ್ಲಾ, ಸಂತೋಷ ಕಾಮಗೌಡ, ಎಂ.ಬಿ.ನಾಗಠಾಣ, ದುರುಗೇಶ ರುದ್ರಾಕ್ಷಿ, ಸಂತೋಷ ಜಗಲಾಸರ, ಶ್ರೀಧರ ಗೋಟೂರ, ಡಾ.ಹಂಪಣ್ಣ ಸೇರಿ ಮುಂತಾದವರು ಉಪಸ್ಥಿತರಿದ್ದರು.

----------------

(ಪೋಟೊ1 ಬಿಕೆಟಿ 5, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆಗೆ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿಗೆ ಶನಿವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಿದ 2ನೇ ಹಂತದ ತರಬೇತಿ ಕಾರ್ಯಕ್ರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ)---------------

ಕೋಟ್‌...

ಮತ ಎಣಿಕೆ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿದಲ್ಲಿ ತಕ್ಷಣ ಸಂಬಂಧಿಸಿದ ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಮತ ಎಣಿಕೆ ಕಾರ್ಯ ನಿರ್ವಹಿಸಲು ತಮಗೆ ತಿಳಿಯದ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ಪಡೆದುಕೊಳ್ಳಿ. ಮತ ಎಣಿಕೆ ಕಾರ್ಯ ಸುಗಮವಾಗಿ ಹಾಗೂ ಸುಸೂತ್ರವಾಗಿ ನಡೆಸಲು ಸನ್ನದ್ದವಾಗಿರಿ.

- ಜಾನಕಿ.ಕೆ.ಎಂ, ಜಿಲ್ಲಾ ಚುನಾವಣಾಧಿಕಾರಿ.

Share this article