
ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನೀಟ್ ಮರುಪರೀಕ್ಷೆ ನೋಡಲ್ ಅಧಿಕಾರಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಭಾಗ್ಯನಂದನ್, ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರಿಂದ ಮಾಹಿತಿ ಪಡೆದರು.
ನೀಟ್(ಯುಜಿ) ಮರು ಪರೀಕ್ಷೆಯನ್ನು ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಹಾಗೂ ಸುಲಲಿತವಾಗಿ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು, ಪರೀಕ್ಷೆ ಬರೆಯುವ ಕೇಂದ್ರದಲ್ಲಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ನೋಡಿಕೊಂಡು ಪರೀಕ್ಷೆ ಕೊಠಡಿಗೆ ತೆರಳುವಂತಾಗಲು ನೋಂದಣಿ ಸಂಖ್ಯೆ ಬೋರ್ಡ್‍ಗಳನ್ನು ಅಳವಡಿಸುವುದು, ಶುದ್ಧ ಕುಡಿಯುವ ನೀರು ವ್ಯವಸ್ಥೆ ಮಾಡುವುದು, ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪ್ರಾಧಿಕಾರದ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಪರೀಕ್ಷಾ ಕೇಂದ್ರ ಸುತ್ತ ಅಗತ್ಯ ನಿಯಮ ಪಾಲಿಸುವುದು, ವಿದ್ಯುತ್ ಪೂರೈಕೆ, ಅಗತ್ಯ ವಾಹನ ಒದಗಿಸುವುದು, ಪೊಲೀಸರ ನಿಯೋಜನೆ ಮತ್ತಿತರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಗಮನಹರಿಸಬೇಕು ಎಂದರು.
ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿ ಹಾಗೂ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಅವರು ಮಾಹಿತಿ ನೀಡಿ ನೀಟ್(ಯುಜಿ) ಮರುಪರೀಕ್ಷೆಯು ಜಿಲ್ಲಾ ಕೇಂದ್ರ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, 516 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ನೀಟ್(ಯುಜಿ) ಮರು ಪರೀಕ್ಷೆ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದ್ದು, ನೀಟ್ ಮರುಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.