ಕನ್ನಡಪ್ರಭ ವಾರ್ತೆ ತುಮಕೂರು
ಉತ್ತರ ಪ್ರದೇಶದ ಝಾನ್ಸಿ ಮಹಾರಾಣಿ ಲಕ್ಷ್ಮಿ ಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅವರು ಪರಿಶೀಲಿಸಿದರು.
ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕ, ಹೆರಿಗೆ ವಾರ್ಡ್, ಡೆಂಗ್ಯು ರೋಗಿಗಳ ವಾರ್ಡ್, ಟ್ರಯೇಜ್ ಕೊಠಡಿ, ಹೊರ ರೋಗಿ ಚೀಟಿ ವಿಭಾಗಳಿಗೆ ಭೇಟಿ ನೀಡಿದ ಅವರು ವಿದ್ಯುತ್ ಶಾರ್ಟ್ ಸರ್ಕ್ಯುಟ್ ವಿದ್ಯುತ್ ವೈರ್‌ಗಳನ್ನು ಪರಿಶೀಲಿಸಬೇಕು. ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಹೊಗೆ ತುಂಬಿಕೊಂಡಲ್ಲಿ ಎಚ್ಚರಿಕೆ ನೀಡಲು ಫೈರ್ ಡಿಟೆಕ್ಟರ್ ಅನ್ನು ಅಳವಡಿಸಬೇಕು ಎಂದು ಅವರು ನಿರ್ದೇಶನ ನೀಡಿದರು.ಅಗ್ನಿ ಅವಘಡಗಳು ಸಂಭವಿಸಿದಾಗ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ಅಣುಕು ಪ್ರದರ್ಶನ ಏರ್ಪಡಿಸಬೇಕೆಂದು ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಹಳೆ ಕಟ್ಟಡಗಳಲ್ಲಿ ಪರಿಶೋಧನೆ ಕೈಗೊಂಡು ವರದಿ ನೀಡಬೇಕೆಂದು ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಕೆ.ಪಿ. ಶಶಿಧರ್ ಅವರಿಗೆ ಸೂಚನೆ ನೀಡಿದರು.
ಆಸ್ಪತ್ರೆಯಲ್ಲಿ ರೋಗಿಗಳು ದಾಖಲಾಗಿರುವ ವಾರ್ಡುಗಳಲ್ಲಿ ಪ್ರತಿದಿನ ಹಾಸಿಗೆ, ಹೊದಿಕೆಗಳನ್ನು ಬದಲಾಯಿಸಬೇಕು. ಹಳೆಯ ಅನುಪಯುಕ್ತ ಉಪಕರಣಗಳನ್ನು ವಾರ್ಡಿನಲ್ಲಿ ಇಡಬಾರದು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಕ್ಕಳ ತಜ್ಞ ಡಾ. ಶ್ರೀನಿವಾಸ್ ಪ್ರಸಾದ್, ಸಹಾಯಕ ಆಡಳಿತ ಅಧಿಕಾರಿ ರವಿ, ಸ್ಥಾನಿಕ ವೈದ್ಯಾಧಿಕಾರಿ ಡಾ. ಚೇತನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.