ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿಫಲ ಬೋರ್‌ವೆಲ್‌ಗಳ ಕುರಿತು ಸುದೀರ್ಘವಾಗಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಪ್ರಸ್ತುತ ಕುಡಿಯುವ ನೀರಿನ ಸರಬರಾಜಿನ ಸ್ಥಿತಿ-ಗತಿ ಕುರಿತು ಅಧಿಕಾರಿಗಳಿಂದ ತಾಲೂಕುವಾರು ಮಾಹಿತಿ ಪಡೆದು ಪರಿಶೀಲಿಸಿದರು. ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ವಿಫಲ ಬೋರ್‌ವೆಲ್‌ಗಳ ಸ್ಥಳ ಪರಿಶೀಲನೆ ನಡೆಸಿ, ಛಾಯಾಚಿತ್ರಗಳೊಂದಿಗೆ ಸಮಗ್ರ ತಾಂತ್ರಿಕ ವರದಿಯನ್ನು ಸಲ್ಲಿಸಬೇಕೆಂದು ಸೂಚಿಸಿದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮೇವಿನ ಲಭ್ಯತೆ ಮತ್ತು ಬೇಡಿಕೆ ಕುರಿತು ಮಾಹಿತಿ ಪಡೆದ ಅವರು, ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಯಾವುದೇ ಪ್ರದೇಶದಲ್ಲಿ ಮೇವು ಕೊರತೆ ಉಂಟಾಗದಂತೆ ತಾಲೂಕು ಮಟ್ಟದಲ್ಲಿ ನಿರಂತರ ಮೇಲ್ವಿಚಾರಣೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಬೆಳೆ ನಷ್ಟದ ಪರಿಶೀಲನೆ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ, ತಾಲೂಕು ಮಟ್ಟದ ಸಹಾಯವಾಣಿಗಳ ಕುರಿತು ವ್ಯಾಪಕ ಪ್ರಚಾರ ಮಾಡಬೇಕು ಮತ್ತು ಸಹಾಯವಾಣಿ ಮೂಲಕ ಸ್ವೀಕರಿಸಲಾಗುತ್ತಿರುವ ಕರೆ ಹಾಗೂ ಸಾರ್ವಜನಿಕರಿಂದ ಬಂದಿರುವ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಸಮಸ್ಯಾತ್ಮಕ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡುವಂತೆ ಸೂಚಿಸಿದರು. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿರುವ ಗ್ರಾಮಗಳ ವಿವರ ಹಾಗೂ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಪರಿಶೀಲಿಸಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ವಾಸುದೇವ್ ಬಿ.ಎಚ್. ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಶಿವಪ್ರಸಾದ್ ಎಚ್.ಎಂ. ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ್ ಎಸ್. ಕಳ್ಳಣ್ಣನವರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.