ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:
ತಾಲೂಕಿನ ಅಡವಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ಹಿರಿಯ ನಾಗರಿಕರಿಗೆ ಗಣತಿ ನಮೂನೆಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿ, ಮತದಾರರ ಪಟ್ಟಿಯನ್ನು ಸಂಪೂರ್ಣ ನಿಖರ ಹಾಗೂ ದೋಷರಹಿತವಾಗಿಸುವುದು ಚುನಾವಣಾ ಆಯೋಗದ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಮತದಾರರ ಮನೆಗೆ ತೆರಳಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡಿ, ಬಿ.ಎಲ್.ಒ.ಗಳು ಭೇಟಿ ನೀಡಿದಾಗ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಒದಗಿಸಬೇಕು ಎಂದು ಮನವಿ ಮಾಡಿದರು.
ಈ ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಮನೆ ಮನೆಗೆ ಭೇಟಿ ನೀಡಿ ಹಾಲಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯವನ್ನು ಇಂದಿನಿಂದ ಆರಂಭಿಸಿದ್ದು, ಹೊಸ ಮತದಾರರ ನೋಂದಣಿ ಹಾಗೂ ಮತದಾರರ ವಿವರಗಳ ಪರಿಷ್ಕರಣೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಈ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕಾಗಿ 1,293 ಮಂದಿ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರು ಜುಲೈ 29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬ ಮತದಾರರಿಗೂ ಗಣತಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿದ ಮಾಹಿತಿಯನ್ನು ಆನ್‌ಲೈನ್ ತಂತ್ರಾಂಶದಲ್ಲಿ ದಾಖಲಿಸಲಿದ್ದಾರೆ. ಈ ಪ್ರಕ್ರಿಯೆಯ ಮೂಲಕ ಮತದಾರರ ಹೆಸರು, ವಿಳಾಸ, ವಯಸ್ಸು ಹಾಗೂ ಇತರ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಲಾಗುತ್ತದೆ ಎಂದರು.
ಸಿಕೆಬಿ-4