ದಲಿತರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮಪತಿಗಳಾಗಿ ಉದ್ಯೋಗ ಕೊಟ್ಟಾಗ ಮಾತ್ರವೇ ಅಂಬೇಡ್ಕರ್ ಅವರ ಆಶಯಗಳಿಗೆ ಬೆಲೆ ಕೊಟ್ಟಂತೆ ಆಗುತ್ತದೆ.
ಕನ್ನಡಪ್ರಭ ವಾರ್ತೆ ಕೋಲಾರಸಮಾಜದಲ್ಲಿ ದಲಿತರು ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಅಷ್ಟೇ ಸೀಮಿತಗೊಳ್ಳದೆ ಉದ್ಯಮಿಯಾಗಿ ನೂರಾರು ಜನಕ್ಕೆ ಉದ್ಯೋಗ ನೀಡುವಷ್ಟು ಮಟ್ಟಿಗೆ ಬೆಳೆಯಬೇಕು. ಜೊತೆಗೆ ಬೇರೆ ಬೇರೆ ವರ್ಗಗಳಂತೆ ತಾವುಗಳು ಸಹ ಎಲ್ಲಾ ಕ್ಷೇತ್ರದಲ್ಲಿ ಬೆಳೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.ನಗರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘ, ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ, ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದಿಂದ ಅಂಬೇಡ್ಕರ್ ಅವರ ೧೩೫ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.ದಲಿತರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮಪತಿಗಳಾಗಿ ಉದ್ಯೋಗ ಕೊಟ್ಟಾಗ ಮಾತ್ರವೇ ಅಂಬೇಡ್ಕರ್ ಅವರ ಆಶಯಗಳಿಗೆ ಬೆಲೆ ಕೊಟ್ಟಂತೆ ಆಗುತ್ತದೆ. ಅಂಬೇಡ್ಕರ್ ಸಮಾಜದಲ್ಲಿ ಮಾನವನ ಘನತೆಯನ್ನು ಎತ್ತಿಹಿಡಿದಿದ್ದಾರೆ. ಶೋಷಣೆ ಎಚ್ಚರಗೊಳ್ಳಲು ಇಂತಹ ಕಾರ್ಯಕ್ರಮ ಮುಖ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘ ಅಧ್ಯಕ್ಷ ಮಾರ್ಜೇನಹಳ್ಳಿ ಬಾಬು ಮಾತನಾಡಿ, ಸರ್ಕಾರವು ದಲಿತ ಗುತ್ತಿಗೆದಾರರಿಗೆ ಅನ್ಯಾಯ ಮಾಡಿದೆ. ಬರುವ ಅನುದಾನವು ನಿರ್ಮಿತಿ ಕೇಂದ್ರ ಮತ್ತು ಕ್ರೆಡಿಲ್‌ಗೆ ಕೊಟ್ಟಿದ್ದು, ದಲಿತ ಗುತ್ತಿಗೆದಾರರಿಗೆ ಸಿಗುತ್ತಿಲ್ಲ. ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಲಾಗಿದೆ. ಅದರ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರವು ಕ್ರಮ ವಹಿಸಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.ಲೋಕೋಪಯೋಗಿ ಇಲಾಖೆಯ ರಾಮಮೂರ್ತಿ ಮಾತನಾಡಿ, ಕುಡಿಯುವ ನೀರು ಇಲಾಖೆಯ ಎಂ.ರಘು, ಸಣ್ಣ ನೀರಾವರಿ ಇಲಾಖೆಯ ವೆಂಕಟರಮಣ, ನಗರಾಭಿವೃದ್ಧಿ ಇಲಾಖೆಯ ಗಂಗಾಧರ, ಹಿರಿಯ ದಲಿತ ಮುಖಂಡರು ವಕ್ಕಲೇರಿ ರಾಜಪ್ಪ, ವರದೇನಹಳ್ಳಿ ವೆಂಕಟೇಶ್, ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ಅಧ್ಯಕ್ಷ ಅಮ್ಮೇರಹಳ್ಳಿ ಚಲಪತಿ, ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಯರಾಮ್ ಮುಖಂಡರಾದ ಕಿರಣ್ ರಾಜಣ್ಣ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.