ಕೃಷಿ ವೆಚ್ಚ ಕಡಿಮೆ ಮಾಡಿಕೊಳ್ಳುವ ಕುರಿತ ಜಾಗೃತಿ ಮೂಡಿಸಿ

KannadaprabhaNewsNetwork |  
Published : Jun 02, 2026, 01:45 AM IST
1ಎಚ್ಎಸ್ಎನ್17 :  | Kannada Prabha

ಸಾರಾಂಶ

ಕೃಷಿ ಇಲಾಖೆ ಜೊತೆಗೆ ಇತರೆ ಇಲಾಖೆಗಳ ಸಮನ್ವಯತೆಯೊಂದಿಗೆ ಸಾವಯವಗೊಬ್ಬರವಾಗಿ ಕೋಳಿ, ಕುರಿಗೊಬ್ಬರ ಮತ್ತಿತರ ಬಳಸಬಹುದು ಎಂಬುದರ ಬಗ್ಗೆ ಪರಿಶೀಲನೆ ಮಾಡಿ ವರದಿ ಸಿದ್ಧಪಡಿಸಿ ಎಂದು ತಿಳಿಸಿದರು. ಧರ್ತಿ ಮಾತಾ ಬಚಾವೋ ನಿಗ್ರಾಣಿ ಸಮಿತಿಗಳ ಕಾರ್ಯವನ್ನು ಚುರುಕುಗೊಳಿಸಿ ರೈತರಲ್ಲಿ ಜಾಗೃತಿ ಮೂಡಿಸಿ ಮಣ್ಣಿನ ಆರೋಗ್ಯದಲ್ಲಿ ಸುಸ್ಥಿರ ಸುಧಾರಣೆಯನ್ನು ತರುವಲ್ಲಿ ಯಶಸ್ವಿಯಾಗಿ ಎಂದು ತಿಳಿಸಿದರು. ಕಾಡು ಕೃಷಿಗೆ ಹೆಚ್ಚಿನ ಉತ್ತೇಜನ ನೀಡಿ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಅರಿವು ಮೂಡಿಸಿ ಎಂದರಲ್ಲದೆ, ಗುಣಮಟ್ಟದ ಬಿತ್ತನೆ ಬೀಜವನ್ನು ಸಮರ್ಪಕವಾಗಿ ವಿಸರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ರೈತರು ರಾಸಾಯನಿಕ ರಸಗೊಬ್ಬರಗಳ ಬಳಕೆ ಕಡಿಮೆ ಮಾಡುವುದರ ಮೂಲಕ ಕೃಷಿ ಚಟುವಟಿಕೆಗಳ ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಕುರಿತು ಸಭೆ ನಡೆಸಿ ಮಾತನಾಡಿದ ಅವರು ರಸಗೊಬ್ಬರಗಳಿಗೆ ಪರ್ಯಾಯವಾಗಿ ಸಾವಯವ ಗೊಬ್ಬರವನ್ನು ಯಾವುದನ್ನು ಎಷ್ಟು ಪ್ರಮಾಣದಲ್ಲಿ ಬಳಸಬೇಕು ಎಂಬುದರ ಬಗ್ಗೆ ರೈತರಿಗೆ ಮಾಹಿತಿ ನೀಡಿ ಉತ್ತೇಜನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಭೂಮಿ ಹಾಳಾಗುವುದನ್ನು ತಪ್ಪಿಸಲು ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸಿ ಗುಣಮಟ್ಟವನ್ನು ಸುಧಾರಿಸಲು ಕಾರ್ಯೋನ್ಮುಖರಾಗಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಿ ರೈತರಿಗೆ ಸ್ಪಷ್ಟ ಮಾಹಿತಿ ನೀಡುವುದರ ಮೂಲಕ ಮನಃಪರಿವರ್ತನೆ ಯಾಗಿ ಸಾವಯವ ಕೃಷಿಗೆ ಬದಲಾಗುವಂತೆ ಉತ್ತೇಜನ ನೀಡಿ ಎಂದು ತಿಳಿಸಿದರು.

ಕೃಷಿ ಇಲಾಖೆ ಜೊತೆಗೆ ಇತರೆ ಇಲಾಖೆಗಳ ಸಮನ್ವಯತೆಯೊಂದಿಗೆ ಸಾವಯವಗೊಬ್ಬರವಾಗಿ ಕೋಳಿ, ಕುರಿಗೊಬ್ಬರ ಮತ್ತಿತರ ಬಳಸಬಹುದು ಎಂಬುದರ ಬಗ್ಗೆ ಪರಿಶೀಲನೆ ಮಾಡಿ ವರದಿ ಸಿದ್ಧಪಡಿಸಿ ಎಂದು ತಿಳಿಸಿದರು. ಧರ್ತಿ ಮಾತಾ ಬಚಾವೋ ನಿಗ್ರಾಣಿ ಸಮಿತಿಗಳ ಕಾರ್ಯವನ್ನು ಚುರುಕುಗೊಳಿಸಿ ರೈತರಲ್ಲಿ ಜಾಗೃತಿ ಮೂಡಿಸಿ ಮಣ್ಣಿನ ಆರೋಗ್ಯದಲ್ಲಿ ಸುಸ್ಥಿರ ಸುಧಾರಣೆಯನ್ನು ತರುವಲ್ಲಿ ಯಶಸ್ವಿಯಾಗಿ ಎಂದು ತಿಳಿಸಿದರು. ಕಾಡು ಕೃಷಿಗೆ ಹೆಚ್ಚಿನ ಉತ್ತೇಜನ ನೀಡಿ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಅರಿವು ಮೂಡಿಸಿ ಎಂದರಲ್ಲದೆ, ಗುಣಮಟ್ಟದ ಬಿತ್ತನೆ ಬೀಜವನ್ನು ಸಮರ್ಪಕವಾಗಿ ವಿಸರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಂಟಿ ಕೃಷಿ ನಿರ್ದೇಶಕರಾದ ರಮೇಶ್, ಉಪ ನಿರ್ದೇಶಕರಾದ ಕೋಕಿಲಾ, ರಸಗೊಬ್ಬರ, ಬಿತ್ತನೆ ಬೀಜ ವಿತರಕರು ಸಭೆಯಲ್ಲಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಜೆ ಬಳಿಕ ಶಾಲೆಗೆ ಮರಳಿದ ಮಕ್ಕಳಿಗೆ ಗುಲಾಬಿ ಹೂ ಜೊತೆ ಸಿಹಿ ಸ್ವಾಗತ
ರಸ್ತೆಗಳಿದು ಆರ್‌ಸಿಬಿ ಗೆಲುವು ಸಂಭ್ರಮಿಸಿದ ಅಭಿಮಾನಿಗಳು