ದೊಡ್ಡಬಳ್ಳಾಪುರ: 2024-25ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನ.30ರಂದು ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಸೂಚಿಸಿದರು.
ನ. 27ರಂದು ನಡೆಯಲಿರುವ ಯುವ ಜನೋತ್ಸವ ಸ್ಫರ್ಧೆಯಲ್ಲಿ ಜಿಲ್ಲೆಯ 15 ವರ್ಷದಿಂದ 29 ವರ್ಷ ವಯೋಮಾನದೊಳಗಿನ ಯುವಕರು ಹಾಗೂ ಯುವತಿಯರು ತಮ್ಮ ಹೆಸರು ನೋಂದಾಯಿಸಿಕೊಂಡು ಭಾಗವಹಿಸಬಹುದು. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲು ಕ್ರಮವಹಿಸಿ ಎಂದರಲ್ಲದೇ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಕಾರ್ಯ ನಿರ್ವಹಿಸಿ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ, ಜಿಲ್ಲಾ ನೆಹರೂ ಯುವ ಕೇಂದ್ರದ ಯುವ ಅಧಿಕಾರಿಗಳಾದ ಶ್ರೀವಾಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಬಾಕ್ಸ್.....
ಗುಂಪು ಸ್ಪರ್ಧೆಗಳು:
ವೈಯಕ್ತಿಕ ಸ್ಪರ್ಧೆಗಳು:
ಯುವ ಕೃತಿ: 1. ಗುಡಿ ಕೈಗಾರಿಕೆಯ ಕಲಾ ಪ್ರಕಾರ, 2. ನೇಕಾರಿಕೆ / ಜವಳಿ, 3. ಕೃಷಿ ಉತ್ಪನ್ನಗಳು. ಹೆಚ್ಚಿನ ವಿವರಗಳಿಗಾಗಿ ದೂ: 9980590960/ 8328673178 ಇಲ್ಲಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಬೆಂ.ಗ್ರಾ. ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕುರಿತು ಪೂರ್ವಭಾವಿ ಸಭೆ ನಡೆಯಿತು.