ಬಂಡೀಪುರ ಸಫಾರಿ ಕೇಂದ್ರ, ಶಾಲೆ ದೇಗುಲಕ್ಕೆ ಡೀಸಿ ಭೇಟಿ: ಪರಿಶೀಲನೆ

KannadaprabhaNewsNetwork |  
Published : Jul 03, 2026, 01:45 AM IST
ಬಂಡೀಪುರ ಸಫಾರಿ ಕೇಂದ್ರ,ಘನತ್ಯಾಜ್ಯ ಘಟಕಕ್ಕೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ | Kannada Prabha

ಸಾರಾಂಶ

ತಾಲೂಕಿನ ಸರ್ಕಾರಿ ಶಾಲೆಗಳು, ದೇವಾಲಯ, ಪ್ರವಾಸಿ ತಾಣವಾದ ಬಂಡೀಪುರ ಸಫಾರಿ ಕೇಂದ್ರಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆತಾಲೂಕಿನ ಸರ್ಕಾರಿ ಶಾಲೆಗಳು, ದೇವಾಲಯ, ಪ್ರವಾಸಿ ತಾಣವಾದ ಬಂಡೀಪುರ ಸಫಾರಿ ಕೇಂದ್ರಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಪರಿಶೀಲಿಸಿದರು.ಪಟ್ಟಣದ ಶತಮಾನ ಪೂರೈಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ತಾಲೂಕಿನ ಚಿಕ್ಕತುಪ್ಪೂರು ಬಳಿಯ ಸರ್ಕಾರಿ ಆದರ್ಶ ಶಾಲೆಗೆ ಭೇಟಿ ಕೊಟ್ಟು ವೀಕ್ಷಿಸಿದ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಸಫಾರಿ ಕೇಂದ್ರಕ್ಕೆ ಭೇಟಿ:ಪ್ರಸಿದ್ದ ಪ್ರವಾಸಿ ತಾಣವಾದ ಬಂಡೀಪುರದ ಸಫಾರಿ ಕೇಂದ್ರಕ್ಕೆ ಭೇಟಿ ನೀಡಿ ಪ್ರವಾಸಿಗರಿಗೆ ಒದಗಿಸಿರುವ ಸೌಲಭ್ಯಗಳನ್ನು ವೀಕ್ಷಿಸಿದರು. ಸಫಾರಿ ಕೇಂದ್ರದಲ್ಲಿ ಮಾರಾಟ ಮಾಡಲಾಗುತ್ತಿರುವ ಉತ್ಪನ್ನಗಳನ್ನು ವೀಕ್ಷಿಸಿದರು.ಸಫಾರಿ ಕೇಂದ್ರದಲ್ಲಿ ಸ್ಥಳೀಯವಾಗಿ ಉತ್ಪಾದಿಸಿದ ಕರಕುಶಲ ವಸ್ತುಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುವಂತೆ ಅರಣ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಪಟ್ಟಣದ ಹೊರ ವಲಯದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮೇಲುಕಾಮನಹಳ್ಳಿಯಲ್ಲಿ ಬುಡಕಟ್ಟು ವಿವಿಧೋದ್ದೇಶ ಕೇಂದ್ರ ಕಾಮಗಾರಿ ವೀಕ್ಷಿಸಿದರು.ಜಿಲ್ಲಾಧಿಕಾರಿ ಜೊತೆ ತಹಶೀಲ್ದಾರ್‌ ಎಂ.ಎಸ್. ತನ್ಮಯ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್‌. ಸ್ವಾಮಿ, ಗುಂಡ್ಲುಪೇಟೆ ಪುರಸಭೆ ಮುಖ್ಯಾಧಿಕಾರಿ ಎಸ್. ಶರವಣ ಇದ್ದರು.೨ಜಿಪಿಟಿ೩ಗುಂಡ್ಲುಪೇಟೆ ಬಳಿಯ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿದಾಗ ಮುಖ್ಯ ಶಿಕ್ಷಕಿ ಎಂ. ಸುಕನ್ಯ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಬೇಡ್ಕರ್ ಸಂವಿಧಾನ ವಿಶ್ವಕ್ಕೆ ಶ್ರೇಷ್ಠ : ಸೋಮಶೇಖರ್‌
ಮಳೆ ಕೊರತೆ ಇದ್ದರೂ ರಾಗಿ ಬೆಳೆಯಬಹುದು: ರೂಪ