ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಎಸ್.ಪಿ, ಸಿಇಒ ಭೇಟಿ ಪರಿಶೀಲನೆ

KannadaprabhaNewsNetwork |  
Published : Jun 22, 2026, 03:00 AM IST
(ಫೋಟೊ21ಬಿಕೆಟಿ8, ಜಿಲ್ಲೆಯಲ್ಲಿ ರವಿವಾರ ನಡೆದ ನೀಟ್-2026 ಮರು ಪರೀಕ್ಷೆ ಹಿನ್ನಲೆಯಲ್ಲಿ ನಗರದಲ್ಲಿ ಸ್ಥಾಪಿಸಲಾದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಹಾಗೂ ಜಿ.ಪಂ ಸಿಇಓ ಗಜಾನನ ಬಾಲೆ ಜಂಟಿಯಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲೆಯಲ್ಲಿ ಭಾನುವಾರ ನಡೆದ ನೀಟ್-2026 ಮರು ಪರೀಕ್ಷೆ ಹಿನ್ನಲೆಯಲ್ಲಿ ನಗರದಲ್ಲಿ ಸ್ಥಾಪಿಸಲಾದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಹಾಗೂ ಜಿ.ಪಂ ಸಿಇಒ ಗಜಾನನ ಬಾಲೆ ಜಂಟಿಯಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯಲ್ಲಿ ಭಾನುವಾರ ನಡೆದ ನೀಟ್-2026 ಮರು ಪರೀಕ್ಷೆ ಹಿನ್ನಲೆಯಲ್ಲಿ ನಗರದಲ್ಲಿ ಸ್ಥಾಪಿಸಲಾದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಹಾಗೂ ಜಿ.ಪಂ ಸಿಇಒ ಗಜಾನನ ಬಾಲೆ ಜಂಟಿಯಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಗರದಲ್ಲಿ ಸ್ಥಾಪಿಸಲಾದ 11 ಪರೀಕ್ಷಾ ಕೇಂದ್ರಗಳ ಪೈಕಿ ಬಸವೇಶ್ವರ ವಿದ್ಯಾವರ್ಧಕ ಸಂಘದ ಪಾಲಿಟೆಕ್ನಿಕ್ ಕಾಲೇಜ, ವಿಜ್ಞಾನ ಮಹಾವಿದ್ಯಾಲಯ, ವಾಣಿಜ್ಯ ಮಹಾವಿದ್ಯಾಲಯ, ಸರ್ಕಾರಿ ಬಾಲಕಿಯರ ಪಪೂ ಕಾಲೇಜು, ನವನಗರದ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪಪೂ ವಸತಿ ಕಾಲೇಜ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭೇಟಿ ಸಮಯದಲ್ಲಿ ಪರೀಕ್ಷಾರ್ಥಿಗಳಿಗೆ ಸುಗಮವಾಗಿ ಪರೀಕ್ಷೆಗೆ ಹಾಜರಾಗುವಂತೆ ಕೇಂದ್ರಗಳಲ್ಲಿ ಕೈಗೊಂಡಿರುವ ವ್ಯವಸ್ಥೆಗಳ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ಪಡೆದುಕೊಂಡರು. ಪ್ರವೇಶ ದ್ವಾರಗಳಲ್ಲಿ ಭದ್ರತಾ ತಪಾಸಣೆ, ಪ್ರೀಸ್ಕಿಂಗ್ ವ್ಯವಸ್ಥೆ ಪರಿಶೀಲನೆ ಸೇರಿ ನಿಯಮಾನುಸಾರ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂಬುವುದನ್ನು ವೀಕ್ಷಿಸಿದರು. ಪರೀಕ್ಷಾ ಕೊಠಡಿಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳ ಸಮಪರ್ಕಕವಾಗಿರುವುದನ್ನು ಖಚಿತಪಡಿಸಿಕೊಂಡರು.

ನೀಟ್-2026 ಮರು ಪರೀಕ್ಷೆಗೆ ಒಟ್ಟು 3,967 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 3,214 ವಿದ್ಯಾರ್ಥಿಗಳು ಹಾಜರಾಗಿ ಉಳಿದ 753 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ ಎಂದು ಸರ್ಕಾರಿಪಾಲಿಟೆಕ್ನಿಕ್ ಕಾಲೇಜನ ಪ್ರಾಚಾರ್ಯ ಪ್ರಭಾಕರ ಪಾಟೀಲ ತಿಳಿಸಿದರು. ಭೇಟಿ ಸಮಯದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ ಸೇರಿದಂತೆ ಇತರರು ಇದ್ದರು,

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೋಶಿ ಸ್ಮಾರಕ ಭವನ ಸಮಾಜಕ್ಕೆ ಅರ್ಪಣೆ
ನಿತ್ಯ ಯೋಗದಿಂದ ರೋಗರುಜಿನ ದೂರು