ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪರಿಶೀಲನೆ ವೇಳೆ ಸರ್ಕಾರದ ಕರ್ತವ್ಯ ಆಪ್ ಅನ್ನು ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಂಡು, ಇ-ಹಾಜರಾತಿ ನಿಯಮಿತವಾಗಿ ದಾಖಲಿಸಬೇಕು. ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಚೇರಿ ಶಿಸ್ತು ಕಾಪಾಸಬೇಕು ಎಂದು ಸೂಚನೆ ನೀಡಿದರು.
ನಂತರ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಅವುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥ ಪಡಿಸುವಂತೆ ತಹಸೀಲ್ದಾರ್ ಅವರಿಗೆ ನಿರ್ದೇಶನ ನೀಡಿದರು.ಇ-ಆಫೀಸ್‌ನಲ್ಲಿ ಬಾಕಿ ಉಳಿದಿರುವ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಆದಾಯ, ಜಾತಿ, ನಿವಾಸ, ವಂಶವೃಕ್ಷ, ಭೂಹಿಡುವಳಿ ಸೇರಿದಂತೆ ಎಲ್ಲಾ ಪ್ರಮಾಣಪತ್ರಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಸಾರ್ವಜನಿಕರಿಗೆ ಒದಗಿಸಬೇಕು. ಸೇವೆಗಳಲ್ಲಿ ಅನಗತ್ಯ ವಿಳಂಬ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿತ್ತನೆ ಬೀಜ ವಿತರಣೆ ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರಿಗೆ ಸಕಾಲದಲ್ಲಿ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳನ್ನು ವಿತರಿಸಲು ಮತ್ತು ಕೇಂದ್ರದಲ್ಲಿ ಸೂಚಿಸಿದರು.
ಬಳಿಕ ಪಟ್ಟಣದ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಘಟಕದ ಓವರ್‌ಹೆಡ್ ಟ್ಯಾಂಕ್ ವೀಕ್ಷಿಸಿದರು. ಶುದ್ಧ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಕೊಳಚೆ ನೀರು ಶುದ್ಧೀಕರಣ ಘಟಕನ್ನು ಪರಿಶೀಲಿಸಿ, ಘಟಕವು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು. ಕೊಳಚೆ ನೀರಿನ ಸಂಸ್ಕರಣೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾನದಂಡಗಳಿಗೆ ಅನುಗುಣವಾಗಿ ನಡೆಯಬೇಕು ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.