ಕನ್ನಡಪ್ರಭ ವಾರ್ತೆ ವಿಜಯಪುರ
ಕಚೇರಿ ಭೇಟಿಯ ವೇಳೆ ಕಚೇರಿಯ ವಾತಾವರಣವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಇಡೀ ಕಚೇರಿಯ ಆವರಣದಲ್ಲಿ ಸಂಪೂರ್ಣ ಶುಚಿತ್ವ, ಶಿಸ್ತು ಹಾಗೂ ಚೊಕ್ಕಟವಾಗಿರುವಂತೆ ನೋಡಿಕೊಳ್ಳಬೇಕು ಎಂದು ಕಚೇರಿಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಚುರುಕು ಮುಟ್ಟಿಸಿದರು. ಅಲ್ಲದೇ, ಈ ಮೂಲಕ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಚೇರಿಗೆ ಆಗಮಿಸುವ ಸಾರ್ವಜನಿಕರ ಹಿತಾಸಕ್ತಿಗೆ ಅಧಿಕಾರಿಗಳು ಮೊದಲ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
ಮೂಲ ಸೌಲಭ್ಯಕ್ಕೆ ಸೂಚನೆ: ಕಚೇರಿಗೆ ಆಗಮಿಸುವ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯದ ಸೌಲಭ್ಯಗಳನ್ನು ಸಮರ್ಪಕವಾಗಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು. ಜೊತೆಗೆ, ವಿವಿಧ ಕೆಲಸ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರ ಅರ್ಜಿಗಳಿಗೆ ಕಾಲಮಿತಿ ಹಾಕಿಕೊಂಡು ಕೆಲಸ ಮಾಡಿಕೊಡಬೇಕು. ಇದರೊಂದಿಗೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತಕ್ಷಣವೇ ಸ್ಪಂದಿಸಿ ತ್ವರಿತ ಸೇವೆಯನ್ನು ತಲುಪಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.ಈ ವೇಳೆ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರಿಂದ ಅವರ ಕೆಲಸ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದು ಕ್ರಮಕ್ಕೆ ಸೂಚನೆ ನೀಡಿದರು.