ತಹಸೀಲ್ದಾರ್, ತಾಪಂ ಕಚೇರಿಗಳಿಗೆ ಡೀಸಿ ಭೇಟಿ

KannadaprabhaNewsNetwork |  
Published : May 24, 2024, 12:49 AM IST
23ಕೆಎಂಎನ್ ಡಿ21 | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಡಾ.ಕುಮಾರ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯಜಿಲ್ಲಾಧಿಕಾರಿ ಡಾ.ಕುಮಾರ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು. ತಾಲೂಕು ಕಚೇರಿಯಲ್ಲಿ ಕಳೆದ ಒಂದು ವಾರದಿಂದ ರೈತರಿಗೆ ಸಂಬಂಧಪಟ್ಟ ಆಧಾರ್ ಸೀಡಿಂಗ್ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು. ಮಳೆ ಹೆಚ್ಚಿನ ಪ್ರಮಾಣದಲ್ಲಿ ಬಂದಿರುವ ಹಿನ್ನೆಲೆಯಲ್ಲಿ ಯಾವುದಾದರೂ ಮನೆ ಅಥವಾ ಬೆಳೆಗಳು ಹಾನಿ ಬಗ್ಗೆ ವರದಿ ಸಿದ್ಧಪಡಿಸುತ್ತಿರುವ ಬಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಚರ್ಚಿಸಿದರು.

ಕಂದಾಯ ಗ್ರಾಮಗಳಿಗೆ ಹಕ್ಕು ಪತ್ರ ನೀಡುವ ಬಾಕಿ ಇರುವ ಪ್ರಕರಣಗಳು, ರಸ್ತೆ ಉತ್ತುವರಿ, 1 ಮತ್ತ 5 ತಿದ್ದುಪಡಿ, ಪಡಿತರ ಚೀಟಿ ಕುರಿತು ದೂರು ಬರುತ್ತಿದ್ದು, ಪರಿಶೀಲನೆ ನಡೆಸಿದರು.

ಮಂಡ್ಯ ತಾಲೂಕಿನಲ್ಲಿ 410 ಹಕ್ಕು ಪತ್ರಗಳಿಗೆ ಡೇಟಾ ಎಂಟ್ರಿ ನಡೆಯುತ್ತಿದೆ. ಅವುಗಳನ್ನು ಸಹ ಪರಿಶೀಲಿಸಿದರು. ರೈತರು ತಮ್ಮ ಪಹಣಿಗಳಿಗೆ ದಾಖಲೆಗಳಿಗೆ ಕಡ್ಡಾಯವಾಗಿ ಆಧಾರ್ ಸೀಡಿಂಗ್ ಆಗಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಜಿಲ್ಲೆಯಲ್ಲಿ ಕೂಡ ಈಗಾಗಲೇ 21 ಲಕ್ಷ ರೈತರ ಪೈಕಿ ಸುಮಾರು 1 ಲಕ್ಷದ 10 ಸಾವಿರ ಆಧಾರ್ ಸೀಡಿಂಗ್ ನ್ನು ಕಳೆದ ಒಂದು ವಾರದಿಂದ ಮಾಡಲಾಗಿದೆ.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಆದೇಶದಂತೆ ಖಾತೆದಾರ ರೈತರ ಆಧಾರ್ ಸೀಡಿಂಗ್ ಯೋಜನೆಯಡಿ ಜಿಲ್ಲೆಯ 21 ಲಕ್ಷ ಖಾತೆದಾರ ರೈತರ ಪೈಕಿ ಈಗಾಗಲೇ 1.10 ಲಕ್ಷ ರೈತರ ಆಧಾರ್ ಲಿಂಕ್ ಮುಗಿಸಲಾಗಿದೆ. ಜೂನ್ ಅಂತ್ಯದೊಳಗೆ ಆಧಾರ್ ಸೀಡಿಂಗ್ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.ಈ ವೇಳೆ ಉಪವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಶಿವಕುಮಾರ್ ಬಿರಾದಾರ್, ಎಡಿಎಲ್ಆರ್ ಮಮತಾ, ಭೂಮಿ ಶಾಖೆ ಸಲಹೆಗಾರ ಲೋಹಿತ್, ಗ್ರಾಮ ಲೆಕ್ಕಾಧಿಕಾರಿ ತೇಜಸ್ ಗೌಡ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ