- ಮೊದಲ ಬಾರಿಗೆ ಸಿ.ಟಿ. ರವಿ ಡಿಸಿಸಿ ಬ್ಯಾಂಕ್‌ಗೆ ಎಂಟ್ರಿ । ಶಾಸಕ ಆನಂದ್, ಮಾಜಿ ಶಾಸಕ ಕುಮಾರಸ್ವಾಮಿ ಪರಾಭವ
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ 5 ನಿರ್ದೇಶಕರ ಸ್ಥಾನಗಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ ಜಯಗಳಿಸಿದ್ದು, ಕಡೂರು ಶಾಸಕ ಕೆ.ಎಸ್. ಆನಂದ್, ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ.
ಬ್ಯಾಂಕಿನ ಆಡಳಿತ ಮಂಡಳಿಯ ಒಟ್ಟು 13 ನಿರ್ದೇಶಕರ ಸ್ಥಾನಗಳ ಪೈಕಿ 8 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದರೆ, ಇನ್ನುಳಿದ 5 ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಯಿತು. ಕಣದಲ್ಲಿ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ, ಕೆ.ಎಸ್. ಆನಂದ್, ಎಂ.ಪಿ. ಕುಮಾರಸ್ವಾಮಿ ಸೇರಿದಂತೆ 10 ಮಂದಿ ಇದ್ದರು.ನಾಲ್ಕು ಕ್ಷೇತ್ರಗಳ ಪೈಕಿ ಚಿಕ್ಕಮಗಳೂರು ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡು ಸ್ಥಾನಗಳ ಫಲಿತಾಂಶ ಕುತೂಹಲ ಮೂಡಿಸಿತ್ತು. ಈ ಕ್ಷೇತ್ರದಲ್ಲಿ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ.ಎಸ್. ನಿರಂಜನ್ ಸ್ಪರ್ಧೆ ಮಾಡಿದ್ದರು.
ಶನಿವಾರ ಬೆಳಿಗ್ಗೆ 9 ಗಂಟೆಗೆ ಇಲ್ಲಿನ ಡಿಸಿಸಿ ಬ್ಯಾಂಕ್‌ನಲ್ಲಿ ಚುನಾವಣಾಧಿಕಾರಿ ಹಾಗೂ ಚಿಕ್ಕಮಗಳೂರು ಉಪ ವಿಭಾಗಾಧಿ ಕಾರಿ ಸುದರ್ಶನ್ ಹಾಗೂ ಸಹಾಯಕ ಚುನಾವಣಾಧಿಕಾರಿ ರೇಷ್ಮಾ ಶೆಟ್ಟಿ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಿದರು. ಚುನಾವಣೆ ಹಿನ್ನಲೆಯಲ್ಲಿ ಮತದಾನ ಕೇಂದ್ರದ 100 ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಚಿಕ್ಕಮಗಳೂರು ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡು ಸ್ಥಾನಗಳಿಗೆ ಸ್ಪರ್ಧೆ ಮಾಡಿದ್ದ 3 ಮಂದಿಯ ಪೈಕಿ ಎಸ್.ಎಸ್. ಭೋಜೇಗೌಡ, ಸಿ.ಟಿ. ರವಿ ಜಯಗಳಿದ್ದು, ಎಂ.ಎಸ್. ನಿರಂಜನ್ ಪರಾಭವಗೊಂಡಿದ್ದಾರೆ. ಕೊಪ್ಪ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದ ಬಿ.ಎಸ್. ಸತೀಶ್ ಜಯಗಳಿಸಿದ್ದು, ಯು.ಎಸ್. ಪ್ರಜ್ವಲ್, ಕೆ.ಎಸ್. ರವೀಂದ್ರ ಪರಾಭವಗೊಂಡಿದ್ದಾರೆ.
--------------------------------------------------------------------------------------
ಸಿ.ಟಿ. ರವಿ27
--------------------------------------------------------------------------------------------
ಯು.ಎಸ್. ಪ್ರಜ್ವಲ್ 05
ಕೆ.ಎಸ್. ರವೀಂದ್ರ 00--------------------------------------------------------------------------------------
ಟಿಎಪಿಸಿಎಂಎಸ್‌ದಿನೇಶ್ ಹೊಸೂರು04ಕೆ.ಎಸ್.ಆನಂದ್03
---------------------------------------------------------------------------------------ಇತರೆ ಸಹಕಾರ ಸಂಘಗಳುಟಿ.ಎಲ್. ರಮೇಶ್56
ಎಂ.ಪಿ.ಕುಮಾರಸ್ವಾಮಿ38------------------------------------------------------------------------------------------ 17 ಕೆಸಿಕೆಎಂ 3ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ ಹಾಗೂ ಬಿಜೆಪಿ, ಜೆಡಿಎಸ್ ಮುಖಂಡರು.