ಡಿಸಿಸಿ ಬ್ಯಾಂಕ್‌ ಸದಸ್ಯತ್ವ ಗೊಂದಲ ಶೀಘ್ರ ನಿವಾರಣೆ: ಬಾಲಚಂದ್ರ ಜಾರಕಿಹೊಳಿ

KannadaprabhaNewsNetwork |  
Published : Oct 04, 2024, 01:22 AM IST
ಬಾಲಚಂದ್ರ ಜಾರಕಿಹೊಳಿ | Kannada Prabha

ಸಾರಾಂಶ

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯತ್ವ ಕುರಿತು ಆಗಿರುವ ಗೊಂದಲವನ್ನು ಶೀಘ್ರವೇ ನಿವಾರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಡಿಸಿಸಿ ಬ್ಯಾಂಕ್‌ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯತ್ವ ಕುರಿತು ಆಗಿರುವ ಗೊಂದಲವನ್ನು ಶೀಘ್ರವೇ ನಿವಾರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‌ ಗಟ್ಟಿಯಾಗಿಯೇ ಇದೆ. ಸದಸ್ಯತ್ವ ಸಂಬಂಧ ಗೊಂದಲ ಉಂಟಾಗಿದೆ. ಹಾಗಾಗಿ, ಡಿಸಿಸಿ ಬ್ಯಾಂಕ್‌ ಸಭೆ ನಡೆಯಲಿಲ್ಲ. ಸದಸ್ಯತ್ವದಲ್ಲಿ ಉಂಟಾಗಿರುವ ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದ್ದು, ಶೀಘ್ರವೇ ಸಮಸ್ಯೆ ನಿವಾರಿಸಲಾಗುವುದು ಎಂದು ಹೇಳಿದರು.

ಲೋಕಸಭಾ ಚುನಾವಣೆ ವೇಳೆ ಅಣ್ಣಾಸಾಹೇಬ ಜೊಲ್ಲೆ ಮತ್ತು ರಮೇಶ ಕತ್ತಿ ಅವರ ನಡುವಿನ ರಾಜಕೀಯ ಸಮರಕ್ಕೂ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೂ ಯಾವುದೇ ರೀತಿಯ ಸಂಬಂಧ ಇಲ್ಲ. ವರ್ಷದೊಳಗೆ ಸದಸ್ಯರಾಗದಿದ್ದರೆ ಮತದಾನದ ಹಕ್ಕು ದೊರೆಯುವುದಿಲ್ಲ. ಸದಸ್ಯತ್ವ ಗೊಂದಲ ದೂರಾದರೆ ಎಲ್ಲವೂ ಸುಸೂತ್ರವಾಗಿ ನಡೆಯಲಿದೆ. ಈ ಕುರಿತು ಪಕ್ಷಾತೀತವಾಗಿ ಎಲ್ಲ ಮುಖಂಡರೊಂದಿಗೆ ಚರ್ಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಗಮನಕ್ಕೂ ತರಲಾಗಿದೆ. ಅಸಮಾಧಾನಗಳು ಸ್ವಾಭಾವಿಕ. ಅವುಗಳನ್ನು ಪರಿಹರಿಸುವುದು ಅಧ್ಯಕ್ಷರ ಜವಾಬ್ದಾರಿ. ₹7 ಸಾವಿರ ಕೋಟಿ ಇರುವ ಠೇವಣಿಯನ್ನು ₹10 ಸಾವಿರ ಕೋಟಿಗೆ ತೆಗೆದುಕೊಂಡು ಹೋಗುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಮುಡಾ ಪ್ರಕರಣ ಸಂಬಂಧ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ವಿಚಾರ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟದ್ದು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಈಗಾಗಲೇ ತಪ್ಪಿತಸ್ಥರ ವಿಚಾರಣೆ ಮಾಡಲಾಗಿದ್ದು, ಸಚಿವರು ರಾಜೀನಾಮೆ ನೀಡಿದ್ದಾರೆ. ಆದರೆ, ಮುಡಾ ತನಿಖೆ ಇನ್ನೂ ಆರಂಭವಾಗಿಲ್ಲ ಎಂದ ಅವರು, ಆಡಳಿತಾತ್ಮಕ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ದೊಡ್ಡ ಜಿಲ್ಲೆ ಬೆಳಗಾವಿಯನ್ನು ವಿಭಜನೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ