ಡಿಸಿಎಂ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್ ಪಕ್ಷದ ಕಟ್ಟಾಳು: ಮಧು ಜಿ.ಮಾದೇಗೌಡ

KannadaprabhaNewsNetwork |  
Published : Aug 26, 2025, 01:03 AM IST
25ಕೆಎಂಎನ್ ಡಿ14 | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ. ಸದನದಲ್ಲಿ ಡಿ.ಕೆ.ಶಿವಕುಮಾರ್ ಅವರು ಆರ್‌ಎಸ್‌ಎಸ್ ಗೀತೆ ಹಾಡಿದಾಕ್ಷಣ ಪಕ್ಷಕ್ಕೆ ಮುಜುಗರವೂ ಆಗಲ್ಲ. ಯಾವುದೇ ತೊಂದರೆಯಾಗಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ಅವಧಿಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಭವಿಷ್ಯ ನುಡಿದರು.

ಇಲ್ಲಿನ ಓಂಶಾಂತಿ ರಸ್ತೆಯ ಸ್ವತಂತ್ರ ಹೋರಾಟಗಾರ ದಿವಂಗತ ನೀಲಕಂಠಯ್ಯ ಮನೆ ಪಕ್ಕದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಡಿಸಿಎಂ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್ ಪಕ್ಷದ ಕಟ್ಟಾಳು. ಉಪ ಮುಖ್ಯಮಂತ್ರಿಯಾಗಿ ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದಾಕ್ಷಣ ಅವರು ಬಿಜೆಪಿ ಹೋಗಲ್ಲ. ಇದರಲ್ಲಿ ಕೆಲವರು ತಪ್ಪು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ. ಸದನದಲ್ಲಿ ಡಿ.ಕೆ.ಶಿವಕುಮಾರ್ ಅವರು ಆರ್‌ಎಸ್‌ಎಸ್ ಗೀತೆ ಹಾಡಿದಾಕ್ಷಣ ಪಕ್ಷಕ್ಕೆ ಮುಜುಗರವೂ ಆಗಲ್ಲ. ಯಾವುದೇ ತೊಂದರೆಯಾಗಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಮುಂದಿನ ಅವಧಿಗೂ ಅವರೇ ಮುಂದುವರೆದು ರಾಜ್ಯದಲ್ಲೆ ಮತ್ತೆ ಪಕ್ಷ ಅಧಿಕಾರಕ್ಕೆ ಬರಲು ಕಾರಣರಾಗಲಿದ್ದಾರೆ ಎಂದರು.

ಭಾರತ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಮುಸ್ಲಿಮರು ಸೇರಿದಂತೆ ಇಲ್ಲಿ ವಾಸಿಸುತ್ತಿರುವ ಎಲ್ಲಾ ಜಾತಿಯ ಜನರು ಭಾರತೀಯರೇ. ಹೀಗಾಗಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಕನ್ನಡದ ಲೇಖಕಿಯಾಗಿ ಬಾನು ಮುಷ್ತಾಕ್ ಬುಕರ್ ಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆ ಉಳಿಸುವ ಕೆಲಸ ಮಾಡುತ್ತಿರುವವರಿಂದ ದಸರಾ ಉದ್ಘಾಟಿಸಲು ಸರ್ಕಾರ ನಿರ್ಧಾರ ಮಾಡಿರುವುದು ಸರಿಯಾಗಿದೆ. ಆದರೆ, ಪ್ರತಿ ಭಾರಿಯೂ ವಿರೋಧ ಪಕ್ಷಗಳು ಆಡಳಿತ ಪಕ್ಷ ಏನೇ ಮಾಡಿದರೂ ಟೀಕೆ, ವಿರೋಧ ಮಾಡುವುದು ಸಹಜ ಎಂದು ಟೀಕಿಸಿದರು.

ನನ್ನ ೩ ವರ್ಷದ ವಿಧಾನ ಪರಿಷತ್ ಸದಸ್ಯ ಸ್ಥಾನದ ಅವಧಿಯಲ್ಲಿ ಇದುವರೆಗೆ ೬ ಕೋಟಿ ರು .ಅನುದಾನ ತಂದಿದ್ದೇನೆ. ಇನ್ನೂ ೩ ವರ್ಷಗಳ ಅವಧಿ ಇದೆ. ಹಾಗಾಗಿ ಇನ್ನಷ್ಟು ಅನುದಾನ ತಂದು ಮದ್ದೂರು ಕ್ಷೇತ್ರ ಸೇರಿದಂತೆ ನನ್ನ ವ್ಯಾಪ್ತಿಯ ದಕ್ಷಿಣ ಪದವೀಧರ ಕ್ಷೇತ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ಈಗಾಗಲೇ ಬಂದಿರುವ ೬ ಕೊಟಿ ರು.ಗಳನ್ನು ಆದ್ಯತೆ ಕೆಲಸಗಳಿಗೆ ಬಳಸಲಾಗಿದೆ. ಹಲವು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಮುಂದೆ ನಡೆಯಬೇಕಾಗಿರುವ ಕೆಲಸಗಳ ಪಟ್ಟಿ ಸಾಕಷ್ಟಿದೆ. ಅದರಂತೆ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಲಾಗುವುದು ಎಂದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ಸೌಭಾಗ್ಯ ರಾಮಣ್ಣ, ಮಾಜಿ ಅಧ್ಯಕ್ಷ ಚಿಕ್ಕವೆಂಕಟೇಗೌಡ, ಪಿಡಿಒ ಸುಧಾ, ಸದಸ್ಯರಾದ ಕೆ.ಟಿ.ಶ್ರೀನಿವಾಸ್, ಕೆ.ವಿ.ಶ್ರೀನಿವಾಸ್‌ಕುಳ್ಳಪ್ಪ, ಭಾರತೀ, ಮುಖಂಡರಾದ ಹಾಗಲಹಳ್ಳಿ ಪುಟ್ಟಸ್ವಾಮಿ, ಕೆ.ಕಬ್ಬಾಳಯ್ಯ, ಸಿಮೇಂಟ್ ವೆಂಕಟೇಶ್, ಕೆಂಚಸ್ವಾಮಿ, ಜಗದೀಶ್, ಗೊಪ್ಪೆಸ್ವಾಮಿ ಸೇರಿದಂತೆ ಮತ್ತಿತರಿದ್ದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ