ಡಾ.ರಾಜೇಂದ್ರ ಕುಮಾರ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅನಿರೀಕ್ಷಿತ ಭೇಟಿ

KannadaprabhaNewsNetwork |  
Published : Mar 04, 2025, 12:32 AM ISTUpdated : Mar 04, 2025, 12:29 PM IST
dk shivakumar

ಸಾರಾಂಶ

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಕಾರ್ಕಳದ ನಿವಾಸಕ್ಕೆ ಅನಿರೀಕ್ಷಿತವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.

 ಮಂಗಳೂರು :  ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಕಾರ್ಕಳದ ನಿವಾಸಕ್ಕೆ ಅನಿರೀಕ್ಷಿತವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.

ಉಡುಪಿ ಜಿಲ್ಲೆಯ ಪ್ರವಾಸದಲ್ಲಿದ್ದ ಡಿ.ಕೆ. ಶಿವಕುಮಾರ್‌ ಅವರು ಸಮಾರಂಭವೊಂದರಲ್ಲಿ ಭಾಗವಹಿಸಲು ಕಾರ್ಕಳಕ್ಕೆ ಭೇಟಿ ನೀಡಿದ ಸಂದರ್ಭ ಡಾ. ರಾಜೇಂದ್ರ ಕುಮಾರ್ ಮನೆಗೆ ಭೇಟಿ ನೀಡಿದ್ದರು.ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ರಾಜ್ಯದ 35 ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಪ್ರಭಾವ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೇಂದ್ರ ಕುಮಾರ್ ಅವರನ್ನು ರಾಜಕೀಯಕ್ಕೆ ಕರೆತರಲು ಹಲವು ಬಾರಿ ಪ್ರಯತ್ನವೂ ನಡೆದಿತ್ತು. 

ಇದೀಗ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಯ ನಡುವೆ ಮತ್ತೆ ರಾಜ್ಯ ರಾಜಕಾರಣಕ್ಕೆ ಕರೆತರುವ ಉದ್ದೇಶದಿಂದ ಈ ಭೇಟಿ ನಡೆಸಿ, ಸಮಾಲೋಚನೆ ನಡೆಸಿದರು.ಡಿ.ಕೆ. ಶಿವಕುಮಾರ್ ಅವರು ಈ ಹಿಂದೆ ರಾಜ್ಯ ಸರ್ಕಾರದ ಸಹಕಾರ ಸಚಿವರಾಗಿದ್ದ ಸಂದರ್ಭದಲ್ಲಿ ನವೋದಯ ಸ್ವಸಹಾಯ ಸಂಘಗಳ ಸಂಘಟನೆಗೆ ಚಾಲನೆ ನೀಡಿದ್ದರು. ಮಾತ್ರವಲ್ಲ, ರಾಜೇಂದ್ರ ಕುಮಾರ್ ಅವರೊಂದಿಗೆ ಅಂದಿನಿಂದ ಇಂದಿನವರೆಗೆ ಅತ್ಯಂತ ಆತ್ಮೀಯರೂ ಆಗಿದ್ದಾರೆ.

ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಡಿ.ಕೆ. ಶಿವಕುಮಾರ್ ಅವರನ್ನು ಗೌರವ ಪೂರ್ವಕವಾಗಿ ಸ್ವಾಗತಿಸಿ, ಸನ್ಮಾನಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಎಂ.ಎಸ್. ಮಹಮ್ಮದ್, ಸುಧಾಕರ್ ಶೆಟ್ಟಿ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಸುನಿಲ್ ಕುಮಾರ್ ಬಜಗೋಳಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ