ಕನಕಪುರ: ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜನಮನ ಗೆದ್ದು ಕಳೆದ ಒಂದು ವಾರದಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದರೂ ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ''''ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ " ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕನಕಪುರ: ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜನಮನ ಗೆದ್ದು ಕಳೆದ ಒಂದು ವಾರದಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದರೂ ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ''''''''ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ " ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಿಧವಾ ಪಿಂಚಣಿ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ಮನೆ, ಇ-ಖಾತಾ, ಪಡಿತರ ಕಾರ್ಡ್‌ಗಾಗಿ ನೂರಾರು ಜನರು ಮನವಿ ಸಲ್ಲಿಸಿದರು. ಜನರ ಅರ್ಜಿಗಳನ್ನು ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಪರಿಹಾರ ನೀಡುವುದಾಗಿ ಡಿಸಿಎಂ ಭರವಸೆ ನೀಡಿದರು.ನೂತನವಾಗಿ ರಚನೆಯಾದ ಕಂದಾಯ ಗ್ರಾಮಗಳ ಹಕ್ಕು ಪತ್ರ ಮತ್ತು ಫಲಾನುಭವಿಗಳಿಗೆ ಇ- ಸ್ವತ್ತು ದಾಖಲೆಗಳನ್ನು ವಿತರಿಸಿದರು. ಫಲಾನುಭವಿಗಳಿಗೆ ಮೀನು ಹಿಡಿಯುವ ಸಲಕರಣೆಗಳ ಕಿಟ್, ವಿವಿಧ ಇಲಾಖೆಗಳ ವತಿಯಿಂದ ಸ್ಥಳೀಯ ಫಲಾನುಭವಿಗಳಿಗೆ ಟ್ಯಾಕ್ಸಿ ಹಾಗೂ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಮಾಡಿದರು.
ಜನಸಂಪರ್ಕ ಸಭೆಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ವಿವಿಧ ಜಾನಪದ ಕಲಾ ತಂಡ ಹಾಗೂ ಮಂಗಳವಾದ್ಯ ಮೇಳದೊಂದಿಗೆ ವೇದಿಕೆಯವರೆಗೂ ಅದ್ದೂರಿಯಾಗಿ ಬರಮಾಡಿಕೊಂಡರು.
ವಿಧಾನ ಪರಿಷತ್ ಸದಸ್ಯ ಎಸ್.ರವಿ, ಸುಧಾಮ್ ದಾಸ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.