ವಿಜಯಪುರ: ಇಂಡಿ, ಚಡಚಣ ಮತ್ತು ಅಫಜಲಪುರ ತಾಲೂಕಿನ ಭೀಮಾ ನದಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಈ ಸಲುವಾಗಿ ಐಬಿಸಿ (ಇಂಡಿ ಬ್ರ್ಯಾಂಚ್ ಕ್ಯಾನಲ್) ಮುಖಾಂತರ 1.5 ಟಿಎಂಸಿ ನೀರನ್ನು ಹಾಗೂ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 1.5 ಟಿಎಂಸಿ ನೀರನ್ನು ಭೀಮಾ ನದಿಗೆ ಹರಿಸುವ ಕುರಿತು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ 1 ಟಿಎಂಸಿ ನೀರು ಬಿಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.