ಕಾಂಗ್ರೆಸ್‌ ಸಂಘಟನೆಗೆ ಜಿಲ್ಲಾಧ್ಯಕ್ಷರಿಗೆ ಡಿಸಿಎಂ ಸೂಚನೆ

KannadaprabhaNewsNetwork |  
Published : Oct 02, 2026, 01:45 AM IST
1ಕೆಎಂಎನ್ ಡಿ11 | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸುವ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಪಕ್ಷದ ಪದಾಧಿಕಾರಿಗಳು ಜಿಲ್ಲೆಯ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸದಲ್ಲಿ ಕಾರ್ಯಾನ್ಮುಖರಾಗಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭಾ ಚುನಾವಣೆ ವೇಳೆಗೆ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಕುಮಾರ್ ಕೊಪ್ಪ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಪಕ್ಷ ಸಂಘಟನೆ ಕುರಿತು ಮಾರ್ಗದರ್ಶನ ನೀಡಿದರು.

ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸುವ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಪಕ್ಷದ ಪದಾಧಿಕಾರಿಗಳು ಜಿಲ್ಲೆಯ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸದಲ್ಲಿ ಕಾರ್ಯಾನ್ಮುಖರಾಗಬೇಕು ಎಂದು ಸಲಹೆ ನೀಡಿದರು.

ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಶಾಸಕರರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಮುಂಬರುವ ಜಿಲ್ಲಾ ಮತ್ತು ತಾಪಂ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶ್ರಮಿಸುವಂತೆ ಉಪಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.

ನಂತರ ಗೃಹ ಸಚಿವ ಪ್ರಿಯಾಂಕಾ ಖರ್ಗೆ ಅವರನ್ನು ಭೇಟಿ ಮಾಡಿದ ಜಿಲ್ಲಾಧ್ಯಕ್ಷ ಕುಮಾರ್ ಕೊಪ್ಪ ಮತ್ತು ಪದಾಧಿಕಾರಿಗಳು ಮಾಲಾರ್ಪಣೆ ಮಾಡಿ ಸನ್ಮಾನಿಸಿದರು. ಈ ವೇಳೆ ಸಣ್ಣ ಕೈಗಾರಿಕೆ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರಾಜ್ಯ ಕಾರ್ಯದರ್ಶಿ ಹೊಂಬಯ್ಯ, ಜಿಲ್ಲಾ ಉಪಾಧ್ಯಕ್ಷ ಹೊಸಗಾವಿ ವಿಜಯಕುಮಾರ್, ವ್ಯವಸಾಯ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಮಹೇಶ್, ರೈತ ಕವಿ ಸಿ.ಎಂ.ಕ್ರಾಂತಿ ಸಿಂಹ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಮರಳಿಗ ಶ್ರೀನಿವಾಸ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಯ ಹಣ ಸುಲಿಗೆಗೆ ಕಿಡ್ನಾಪ್ ನಾಟಕವಾಡಿದ ಮಗ : ಅಂದರ್‌
ಯುದ್ಧಪೀಡಿತ ಪ್ರದೇಶದಂತಿರುವ ಇಂದಿರಾ ನಗರ ಪುಟ್‌ಪಾತ್!